ಐತಿಹಾಸಿಕ ಸ್ಮಾರಕಗಳ ಸೌಂದರ್ಯ ಸೆರೆಹಿಡಿದ ಛಾಯಾಚಿತ್ರ ಪ್ರದರ್ಶನ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 27:ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಎನ್ಟಿಪಿಸಿ, ಕೆಎಸ್ಟಿಡಿಸಿ ಹಾಗೂ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಸಹಯೋಗದಲ್ಲಿ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಆವರಣದಲ್ಲಿ ಜಿಲ್ಲಾ ಮಟ್ಟದ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿತ್ತು.ಪ್ರದರ್ಶನವನ್ನು ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕಧೋಂಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿಜಯಪುರದ ಐತಿಹಾಸಿಕ ಸ್ಮಾರಕಗಳ ಸೌಂದರ್ಯವನ್ನು ಛಾಯಾಗ್ರಾಹಕರು ತಮ್ಮ ಕ್ಯಾಮೆರಾ ಕಣ್ಣಿನ ಮೂಲಕ ಅತ್ಯುತ್ತಮವಾಗಿ ಸೆರೆಹಿಡಿದು, ಅವುಗಳ ಕಲಾತ್ಮಕತೆಯನ್ನು ಜನರಿಗೆ ಪರಿಚಯಿಸುವ ಮೂಲಕ ಪ್ರವಾಸೋದ್ಯಮ…


