ಜನತಾ ನ್ಯಾಯಾಲಯದಲ್ಲಿ 16,678 ಪ್ರಕರಣ ಇತ್ಯರ್ಥ: ರಾಜಿ ಸಂಧಾನದ ಮೂಲಕ ಶೀಘ್ರ ನ್ಯಾಯಕ್ಕೆ ನ್ಯಾಯಾಧೀಶರ ಕರೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿತಾಯವಾಗುವುದರಿಂದ ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್ (ಜನತಾ ನ್ಯಾಯಾಲಯ) ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಸಲಹೆ ನೀಡಿದರು.ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರ್ಷಗಳ ಕಾಲ ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ ಪರಸ್ಪರ ರಾಜಿ ಸಂಧಾನದ…


