
ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಇಲ್ಲಿನ ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸ ದಿನಾಚರಣೆ ಆಚರಿಸಲಾಯಿತು.ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಹಾಗೂ ಪದವಿ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ತುಕಾರಾಮ ಚಂಚಲಕರ ಅವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿ, ಎಲ್ಲರೂ ದೇಶಪ್ರೇಮವನ್ನು ಮೈಗೂಢಿಸಿಕೊಳ್ಳಬೇಕು. ಡಾ. ಬಾಬಾ ಸಾಹೇಬ್ ಅಂಬೇಡ್ಕರ ಅವರ ತತ್ವ ಸಿದ್ಧಾಂತಗಳನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಮಾರ್ಮಿಕವಾಗಿ ಹೇಳಿದರು.ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯಗುರುಗಳಾದ ಎಸ್.ಎಸ್. ಗುಡ್ಲೇನವರ,…