ಬಿಹಾರ್ ನಲ್ಲಿ ಎನ್ ಡಿ ಎ ಜಯಭೇರಿ: ಬಿಜೆಪಿ ವಿಜಯೋತ್ಸವ

ಸಪ್ತಸಾಗರ ವಾರ್ತೆ ವಿಜಯಪುರ, ನ. 15: ಬಿಹಾರಿನಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ವಿಜಯೋತ್ಸವ ಆಚರಿಸಿದರು.ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಬಿಜೆಪಿ ಬಾವುಟ ಹಿಡಿದು ಸಂಭ್ರಮೋತ್ಸವದಲ್ಲಿ ಭಾಗಿಯಾದರು. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸಿ ವಿಜಯೋತ್ಸವ ಸಂಭ್ರಮದಲ್ಲಿ ಮಿಂದೆದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ಬಿಜೆಪಿಯ ಜನಪರ ನಿಲುವಿಗೆ ಬಿಹಾರ ಜನತೆ ಗೆಲುವಿನ ಉಡುಗೊರೆ ನೀಡಿದ್ದಾರೆ. ಬಿಹಾರ ಸರ್ವತೋಮುಖ ವಿಕಾಸವನ್ನು ಕೇಂದ್ರವಾಗಿರಿಸಿಕೊಂಡು ಚುನಾವಣೆ ಎದುರಿಸಿದ್ದ…

Read More

ಹೊನ್ನುಟಗಿಯಲ್ಲಿ ಮಕ್ಕಳ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 14:ಹೊನ್ನುಟಗಿಯಲ್ಲಿ ಪ್ರಾರ್ಥನಾ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆದ ದೇಶದ ಮೊದಲ ಪ್ರಧಾನಮಂತ್ರಿ ಪಂಡಿತ ಜವಾಹರಲಾಲ್ ನೆಹರು ಅವರ ಜನ್ಮದಿನದ ಪ್ರಯುಕ್ತ ಮಕ್ಕಳ ದಿನಾಚರಣೆಯನ್ನು ಉತ್ಸಾಹಭರಿತವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲ ದಿವಾಕರ್ ಕೆ ಆರ್ ಅವರು ವಹಿಸಿದ್ದರು.ಈ ಸಂದರ್ಭದಲ್ಲಿ ಶಾಲೆಯ ಸಂಸ್ಥಾಪಕ ಹೆಚ್. ಎಂ ಸಾರವಾಡ ಅವರು ಮುಖ್ಯ ಅತಿಥಿಗಳಾಗಿ ಹಾಜರಿದ್ದು ಮಕ್ಕಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಅವರು ಶಿಕ್ಷಣದ ಮಹತ್ವ, ಮಕ್ಕಳ ಕನಸುಗಳನ್ನು ಬೆಂಬಲಿಸುವ ಕುಟುಂಬ ಮತ್ತು ಶಾಲೆಯ ಜವಾಬ್ದಾರಿಗಳು ಮಕ್ಕಳ…

Read More

ಬಿ.ಎಲ್.ಡಿ. ಇ ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಪಾಟೀಲ ಜನ್ಮ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 9: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಅವರ ಜನ್ಮದಿನವನ್ನು ಇಂದು ರವಿವಾರ ಗಣ್ಯರೊಂದಿಗೆ ಸೇರಿ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.ವೃಕ್ಷಥಾನ್ ಹೆರಿಟೇಜ್ ರನ್ ಸಮಿತಿ, ವಿಜಯಪುರ ಜಿಲ್ಲಾ ಸೈಕ್ಲಿಂಗ್ ಗ್ರುಪ್ ಜಂಟಿಯಾಗಿ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಬಸನಗೌಡ ಎಂ. ಪಾಟೀಲ, ವೈದ್ಯಕೀಯ ಕಾಲೇಜಿನ ಶರೀರಕ್ರಿಯಾ ಶಾಸ್ತ್ರ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊ. ಕುಸಾಲ ದಾಸ ಮತ್ತೀತರ ಗಣ್ಯರು ಜನ್ಮದಿನದ ಅಂಗವಾಗಿ ಸಸಿ ನೆಟ್ಟರು.ಈ…

Read More

ಬಿಜೆಪಿ ವತಿಯಿಂದ ಕನಕ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 8 : ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭಕ್ತ ಕನಕದಾಸರ ಜಯಂತೋತ್ಸವವನ್ನು ಆಚರಿಸಲಾಯಿತು. ಬಿಜೆಪಿ ಕಾರ್ಯಾಲಯದಲ್ಲಿ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ಪೂಜೆ ಸಲ್ಲಿಸಲಾಯಿತು. ನಂತರ ಕನಕದಾಸರ ವೃತ್ತಕ್ಕೆ ತೆರಳಿದ ಕಾರ್ಯಕರ್ತರು ಕನಕದಾಸರ ವೃತ್ತಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಕನಕದಾಸರು ಶ್ರೇಷ್ಠ ದೈವಭಕ್ತರು, ಅವರಲ್ಲಿರುವ ಅದಮ್ಯ ದೈವ ಭಕ್ತಿ ಪ್ರತಿಯೊಬ್ಬರಿಗೂ ಸ್ಪೂರ್ತಿ, ಕನಕದಾಸರ ಶ್ರೇಷ್ಠ ಭಕ್ತಿಗೆ ಕೇಶವ…

Read More

ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನ ಆಚರಿಸಲಾಯಿತು.ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮಿಕಿ‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಇದೇ ವೇಳೆ ಬಿ.ಎಲ್.ಡಿ.ಇ‌ ಸಂಸ್ಥೆಯ ಅಧ್ಯಕ್ಷ ಮತ್ತು‌‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನವನ್ನು ಸಸಿ ವಿತರಿಸಯವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ‌ ಸಹಾಯಕ ಪ್ರಾಧ್ಯಾಪಕ‌ ಡಾ….

Read More