celebration
ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ
70th Kannada Rajyotsava celebration at Sanganabasava Shishuniketan School.
ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನ ಆಚರಿಸಲಾಯಿತು.ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮಿಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಇದೇ ವೇಳೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನವನ್ನು ಸಸಿ ವಿತರಿಸಯವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ….
16 ಕಿ.ಮಿ ಓಟದ ಮೂಲಕ ಸಚಿವ ಎಂಬಿಪಿ ಹುಟ್ಟುಹಬ್ಬ ಆಚರಣೆ
ಸಪ್ತ ಸಾಗರ ವಾರ್ತೆ,ವಿಜಯಪುರ, ಅ.7: ವಿಜಯಪುರ ಹೊರವಲಯದ ಮಾನವ ನಿರ್ಮಿತ ಅರಣ್ಯ ಪ್ರದೇಶದಲ್ಲಿ 16 ಕಿ.ಮೀ ಓಡುವ ಮೂಲಕ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು ಸಚಿವ ಎಂ.ಬಿ.ಪಾಟೀಲ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.ಇಂದು ಬೆಳಗ್ಗೆ 6 ಗಂಟೆಗೆ ಬಿ.ಎಂ. ಪಾಟೀಲ ವೃತ್ತದಿಂದ ಓಟ ಆರಂಭಿಸಿದ ಸದಸ್ಯರು, ಸೋಲಾಪುರ, ಅರಕೇರಿ ರಸ್ತೆ ಮೂಲಕ ಭೂತನಾಳ ಕೆರೆ ಪರಿಸರದಲ್ಲಿ, ಕರಾಡ ದೊಡ್ಡಿ ಅರಣ್ಯದಲ್ಲಿ ಓಡುತ್ತ, ಬಿ.ಎಂ.ಪಾಟೀಲ ವೃತ್ತಕ್ಕೆ ಮರಳಿದರು. ಒಟ್ಟು 16 ಕಿ.ಮೀ ಓಟದಲ್ಲಿ 15 ಕ್ಕೂ ಹೆಚ್ಚು…
ಬಿ.ಎಲ್.ಡಿ.ಇ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ರೇಬಿಸ್ ದಿನಾಚರಣೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 29: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ , ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ಸೋಮವಾರ ವಿಶ್ವ ರೇಬೀಸ್ ದಿನ ಆಚರಿಸಲಾಯಿತು.ಈ ದಿನಾಚರಣೆ ಅಂಗವಾಗಿ ಮಹಾವಿದ್ಯಾಲಯದ ಅಗದತಂತ್ರ ವಿಭಾಗದಿಂದ ಏರ್ಪಡಿಸಲಾಗಿದ್ದು ಜನಸಾಮಾನ್ಯರಲ್ಲಿ ರೇಬಿಸ್ ವೈರಾಣು ಹರಡುವ ವಿಧಾನ, ರೋಗ ಪೀಡಿತ ಸಾಕಿದ ನಾಯಿಗಳಿಂದ ಹಾಗೂ ಬೀದಿ ನಾಯಿಗಳಿಂದ ಕೆಲವು ಬಾರಿ ಎದುರಾಗುವ ಪ್ರಾಣಾಪಾಯದ ಕುರಿತು ಜನಜಾಗೃತಿ ಅಭಿಯಾನ ನಡೆಸಲಾಯಿತು. ಈ ಅಭಿಯಾನದಲ್ಲಿ ಮಹಾವಿದ್ಯಾಲಯದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು…
ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಇಲ್ಲಿನ ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸ ದಿನಾಚರಣೆ ಆಚರಿಸಲಾಯಿತು.ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಹಾಗೂ ಪದವಿ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ತುಕಾರಾಮ ಚಂಚಲಕರ ಅವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿ, ಎಲ್ಲರೂ ದೇಶಪ್ರೇಮವನ್ನು ಮೈಗೂಢಿಸಿಕೊಳ್ಳಬೇಕು. ಡಾ. ಬಾಬಾ ಸಾಹೇಬ್ ಅಂಬೇಡ್ಕರ ಅವರ ತತ್ವ ಸಿದ್ಧಾಂತಗಳನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಮಾರ್ಮಿಕವಾಗಿ ಹೇಳಿದರು.ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯಗುರುಗಳಾದ ಎಸ್.ಎಸ್. ಗುಡ್ಲೇನವರ,…
ಸ್ವಾತಂತ್ರೋತ್ಸವ ಆಚರಣೆ: ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಸಪ್ತಸಾಗರ ವಾರ್ತೆ ವಿಜಯಪುರ, ಆ. 15:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನ ಸೂರೆಗೊಂಡವು.ಪ್ರತಿ ತಂಡವು ತಮ್ಮ ಮನೋಜ್ಞ ಅಭಿನಯ ಪ್ರೇಕ್ಷಕರ ರೋಮಾಂಚನಗೊಳಿಸುವ ಮೂಲಕ ಮಂತ್ರಮುಗ್ಧಗೊಳಿಸಿತು. ಪ್ರೇಕ್ಷಕರು ಮಕ್ಕಳ ಅಭಿನಯಕ್ಕೆ ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಹುರಿ ದುಂಬಿಸುತ್ತಿದ್ದರು.ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆ, ಸಮೂಹ ನೃತ್ಯ,ಗಾಯನ ಪ್ರೇಕ್ಷಕರ…
ಬಿಎಲ್ ಡಿಇ ಡೀಮ್ಡ್ ವಿವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಇಂದು ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಧ್ವಜಾರೋಹಣ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬ್ರಿಟಿಷ್ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಲು ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ. ಈ ದಿನದಂದು ಅವರ ತ್ಯಾಗವನ್ನು ಸ್ಮರಿಸುವ…
ಬಿ.ಎಂ. ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 15: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಶುಕ್ರವಾರ ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂಸೇನಾಪಡೆಯ ನಿವೃತ್ತ ಸುಬೇದಾರ ವಿಶ್ವನಾಥ ಹಿರೇಮಠ ಅವರು ಧ್ವಜಾರೋಹಣ ನೆರವೇರಿಸಿದರು.ಬಳಿಕ ಶಾಲೆಯ ನಾನಾ ಸದನಗಳ ವಿದ್ಯಾರ್ಥಿಗಳ ಪದ ಕವಾಯತ್ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಸೇವಾವಧಿಯಲ್ಲಿ ನಡೆದ ಸೇನಾ ಕಾರ್ಯಾಚರಣೆ, ಯೋಧರ ತ್ಯಾಗ, ಬಲಿದಾನಗಳ ಕುರಿತು ವಿವರಿಸಿದರು. ಅಲ್ಲದೇ, ಮಾಜಿ ರಾಷ್ಟ್ರಪತಿ…
ನಂಜನಗೂಡು ರಾಯರ ಮಠದಲ್ಲಿಭಕ್ತಿ ಭಾವದಿಂದ ಪೂರ್ವಾರಾಧನೆ ಆಚರಣೆ
ಸಪ್ತಸಾಗರ ವಾರ್ತೆ, ವಿಜಯಪುರ,ಆ. 10:ಕಲಿಯುಗದ ಕಾಮಧೇನು-ಕಲ್ಪವೃಕ್ಷ ಎಂದೇ ಖ್ಯಾತನಾಮರಾದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ೩೫೪ನೇ ಆರಾಧನಾ ಮಹೋತ್ಸವ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥರ ಆಜ್ಞಾನುಸಾರವಾಗಿ ಭಾನುವಾರ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಅತ್ಯಂತ ಭಕ್ತಿಪುರಸ್ಸರವಾಗಿ ಆರಂಭಗೊಂಡಿತು.ಇದರ ಅಂಗವಾಗಿ ಸುಪ್ರಭಾತ,ನಿರ್ಮಾಲ್ಯ ವಿಸರ್ಜನೆ, ವೇದ ಪಾರಾಯಣ ಜರುಗಿದವು. ಬಳಿಕ ಬೆಳಿಗ್ಗೆ ಅಷ್ಟೋತ್ತರ ಸಹಿತ ಫಲಪಂಚಾಮೃತಾಭಿಷೇಕ ನಡೆಯಿತು.ಶ್ರೀ ಗುರುಸಾರ್ವಭೌಮರ ಮಹಿಮೆ ಕುರಿತು ಪಂಡಿತ ಮಧ್ವೇಶಾಚಾರ್ಯ ಜೋಶಿ(ಮುತ್ತಗಿ) ಪ್ರವಚನ ನೀಡಿ, ಗುರುಸಾರ್ವಭೌ ಮರು ಕರುಣಾಮಯಿ ಭಕ್ತರು ಭಕ್ತಿಯಿಂದ ಕೇಳಿದ ಎಲ್ಲವನ್ನು ಕರುಣಿಸಬಲ್ಲವರು…


