
ಸ್ವಾತಂತ್ರ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರ
ಸಪ್ತಸಾಗರ ವಾರ್ತೆ ವಿಜಯಪುರ, ಆ. 16: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು.ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ನಡೆದ ಈ ಶಿಬಿರದಲ್ಲಿ 41 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಬಿ. ಕಮತಿ, ಉಪಪ್ರಾಚಾರ್ಯ ಎಸ್. ಎ. ಪಾಟೀಲ, ಸಂಸ್ಥೆಯ ಕಾನೂನು ಸಲಹೆಗಾರ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಸಂಯೋಜಕ ಸೂರ್ಯಕಾಂತ ಬಿರಾದಾರ, ಶ್ರೀ ಬಿ. ಎಂ….