ಜನಗಣತಿ ಯಶಸ್ವಿಗೊಳಿಸಲು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 5: ಜನಗಣತಿ-2027ರಡಿ ಮನೆಗಳ ಪಟ್ಟಿ ಮತ್ತು ಮನೆ ಗಣತಿಯನ್ನು ಏ. 16 ರಿಂದ ಮೇ 15ರವರೆಗೆ 30 ದಿನಗಳ ಕಾಲ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ಈಗಾಗಲೇ ಏ. 1ರಿಂದ ಸ್ವಯಂ ಗಣತಿಗೆ ಅಧಿಕೃತ ಚಾಲನೆ ಸಿಕ್ಕಿದ್ದು, ಏ. 15 ರವರೆಗೆ ಅವಕಾಶ ಕಲ್ಪಿಸಲಾಗಿದೆ ತಿಳಿಸಿದರು.ಜನಗಣತಿಯು ಅತ್ಯಂತ ತಳಮಟ್ಟದ ಆಡಳಿತ ಘಟಕಗಳಿಗೆ, ಅಂದರೆ, ಗ್ರಾಮೀಣ ಪ್ರದೇಶದ ಹಳ್ಳಿಗಳು ಮತ್ತು ನಗರ ಪ್ರದೇಶಗಳಲ್ಲಿನ ಪಟ್ಟಣ, ವಾರ್ಡ್ ಗಳಿಗೆ ವಸತಿ ಸ್ಥಿತಿ,…


