ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

ಸಪ್ತಸಾಗರ ವಾರ್ತೆ,ಬೆಂಗಳೂರು, ಜುಲೈ 23: “ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು.ಬೆಂಗಳೂರಿನ ಕೆ ಜಿ ರಸ್ತೆ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.“ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ವೈಫಲ್ಯವನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು….

Read More

NEET ಪರೀಕ್ಷೆಯ ಭ್ರಷ್ಟಾಚಾರ ಮತ್ತು ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಆಕ್ರೋಶ: ಬಿಜೆಪಿ ಕಚೇರಿಗೆ ಮುತ್ತಿಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 14 : ದೇಶದ ಅತ್ಯಂತ ಮಹತ್ವದ ವೈದ್ಯಕೀಯ ಪ್ರವೇಶ ಪರೀಕ್ಷೆಯಾಗಿರುವ NEET ಪರೀಕ್ಷೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮಗಳು, OMR ತಿದ್ದುಪಡಿ ಹಾಗೂ ಭ್ರಷ್ಟಾಚಾರ ಪ್ರಕರಣಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳಿವೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ವಿಜಯಪುರ ಬಿಜೆಪಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗಿದೆ.ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, National Testing Agency (NTA)…

Read More

ಕೇಂದ್ರದ ಜಿಎಸ್‌ಟಿ ನೀತಿ ಮೂಲಕ ಜನರ ಲೂಟಿ: ಮಂಜುನಾಥ ಗೌಡ ಟೀಕೆ

ಸಪ್ತಸಾಗರ ವಾರ್ತೆ, ಮುದ್ದೇಬಿಹಾಳ, ಅ.5 :ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ಜಿಎಸ್‌ಟಿ, ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ ಗೌಡ ಗಂಭೀರ ಆರೋಪ ಮಾಡಿದರು.ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಯುವ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಾಧನೆಗಳನ್ನು ಮತ್ತು ಕೇಂದ್ರ…

Read More