
ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಸಿಇಓ ರಿಷಿ ಆನಂದ ಕರೆ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ 2 ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು 2017 ರಿಂದ ಈ ಸ್ವಚ್ಛತೆಯೇ ಸೇವೆ ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವದ ಕುರಿತು ಜಾಗೃತಿ ಮೂಡಿಸುವ…