ಕೊಯಿಮತ್ತೂರು ಬ್ಲಾಸ್ಟ್ ಪ್ರಕರಣ: ಓರ್ವ ಆರೋಪಿ ಬಂಧನ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 10:ತಮಿಳುನಾಡಿನ ಕೊಯಿಮತ್ತೂರಿನಲ್ಲಿ ನಡೆದ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ವಾಸವಾಗಿದ್ದ ಪ್ರಮುಖ ಆರೋಪಿಯನ್ನು ತಮಿಳುನಾಡಿನ ಕೊಯಿಮತ್ತೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಸಾದಿಕ್ ರಾಜಾ (50) ಬಂಧಿತ ಆರೋಪಿ.1998 ರಲ್ಲಿ ತಮಿಳುನಾಡಿನ ಕೊಯಿಮತ್ತೂರಿನಲ್ಲಿ ಬ್ಲಾಸ್ಟ್ ಪ್ರಕರಣ ನಡೆದಿತ್ತು. ಇದಾದ ಬಳಿಕ ಪ್ರಮುಖ ಆರೋಪಿ ಸಾದಿಕ್ ರಾಜಾ ಕಳೆದ 27 ವರ್ಷಗಳಿಂದ ಬೇರೆ ಬೇರೆ ಕಡೆಗಳಲ್ಲಿ ತಲೆ ಮರೆಸಿಕೊಂಡಿದ್ದ.ಕಳೆದ 12 ವರ್ಷಗಳಿಂದ ತರಕಾರಿ ಮಾರಾಟ ಮಾಡಿಕೊಂಡು ವಿಜಯಪುರದಲ್ಲಿ ಜೀವನ ನಡೆಸುತ್ತಿದ್ದ…