
ಬಸವಣ್ಣನವರ ತತ್ವ, ಆದರ್ಶಗಳು ಸಪ್ತಸಾಗರದ ಆಚೆಗೂ ಹರಡಬೇಕಿದೆ: ಚನ್ನಬಸವ ಸ್ವಾಮೀಜಿ
ಸಪ್ತಸಾಗರ ವಾರ್ತೆ ವಿಜಯಪುರ, ಆ. 5: ಸಾಮಾಜಿಕ ಸಮಾನತೆಯ ಹರಿಕಾರರಾದ ಬಸವಣ್ಣನವರ ತತ್ವ, ಆದರ್ಶಗಳು ಇಂದು ಸಪ್ತಸಾಗರದಾಚೆಗೂ ಹರಡಬೇಕಾದ ಅವಶ್ಯಕತೆ ಬಂದೊದಗಿದೆ. ಆ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ~ ಎಂದು ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಹೇಳಿದರು. ಬಸವನಬಾಗೇವಾಡಿ ತಾಲೂಕಿನ ರಾಬಿನಾಳ ಗ್ರಾಮದಲ್ಲಿ ರಾಷ್ಟ್ರೀಯ ಬಸವಸೈನ್ಯ ಆಯೋಜಿಸಿದ್ದ ಬಸವ ಸಂಸ್ಕೃತಿ ಅಭಿಯಾನದ ಚಿಂತನ ಮಂಥನ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ದೇವರು ನಮಗೆ ಎರಡು ಕೈಗಳನ್ನು ನೀಡಿದ್ದು, ಒಂದು…