ಬದುಕಿನ ನೆಮ್ಮದಿಗೆ ದೇವರ ಸ್ಮರಣೆ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ದೇವರ ಸ್ಮರಣೆಯಿಂದ ಪ್ರತಿಯೊಬ್ಬರ ಬದುಕಿನಲ್ಲಿ ನೆಮ್ಮದಿ ಮೂಡಿ, ಧನಾತ್ಮಕ ಶಕ್ತಿಯ ಅನುಭವವಾಗುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಕಾರ್ಯಕ್ರಮದಲ್ಲಿ ‘ಉದಯಲಿಂಗೇಶ್ವರ ಚರಿತಾಮೃತ’ ಧ್ವನಿಸುರುಳಿ ಬಿಡುಗಡೆ ಮಾಡಿ ಅವರು ಮಾತನಾಡಿದರು.ದೇವರ ನಾಮ ಸ್ಮರಣೆಯು ಸರಳ. ಆದರೆ ಪರಿಣಾಮಕಾರಿಯಾಗಿದೆ. ಇದು ಎಲ್ಲರ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಯಶಸ್ಸನ್ನು ತರುತ್ತದೆ…

Read More

ಮಾನವನ ಬಾಳು ಉಜ್ವಲಗೊಳ್ಳಲು ಅಧ್ಯಾತ್ಮ ಬೇಕು-ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ ವಿಜಯಪುರ, ಆ. 2: ಜಗ ಬೆಳಗಲು ಸೂರ್ಯ, ಬದುಕು ಬೆಳಗಲು ಗುರು ಬೇಕು. ಭೌತಿಕ ಬದುಕನ್ನು ಬೆಳಗಲು ಅಧ್ಯಾತ್ಮ ಬೇಕು. ಅಂದಾಗ ಮಾನವನ ಬಾಳು ಉಜ್ವಲಗೊಳ್ಳಲಿದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಶ್ರಾವಣ ಮಾಸದ ನಿಮಿತ್ತ ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಹಿರೇಮಠದಲ್ಲಿ ನಡೆಯುತ್ತಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಪುರಾಣದಲ್ಲಿ ತೊಟ್ಟಿಲು ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.‘ನೈತಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಜನತೆಗೆ ಮಾನಸಿಕ ನೆಮ್ಮದಿ ಇಲ್ಲದಂತಾಗಿದೆ….

Read More