ಸಾಂಸ್ಕೃತಿಕ ಪರಂಪರೆಯ ಪ್ರತೀಕ ಗಣೇಶ ಹಬ್ಬ: ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 14: ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ಆಧ್ಯಾತ್ಮಿಕತೆ ಹಾಗೂ ಪರಿಸರ ಪ್ರಜ್ಞೆಯನ್ನು ಬೆಳೆಸುವ ಮಹತ್ವದ ಆಚರಣೆಯಾಗಿದೆ ಎಂದು ಉದಯಲಿಂಗೇಶ್ವರ ಮಠದ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಗಣೇಶ ಮೂರ್ತಿ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಗಣೇಶೋತ್ಸವವು ವಿದ್ಯಾರ್ಥಿಗಳಿಗೆ ನಮ್ಮ ಸಾಂಸ್ಕೃತಿಕ ಪರಂಪರೆಯ ಪರಿಚಯದ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ತಿಳಿಸಿಕೊಡುತ್ತದೆ. ಇಂತಹ ಆಚರಣೆಗಳು ಮಕ್ಕಳಲ್ಲಿ ಶೈಕ್ಷಣಿಕ ತಿಳುವಳಿಕೆಯೊಂದಿಗೆ ಸಂಸ್ಕೃತಿ ಹಾಗೂ…

Read More