ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ
ಸಪ್ತಸಾಗರ ವಾರ್ತೆ, ಮೈಸೂರು, ಜು. 18:ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ…


