ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಯಲು ಮುಖ್ಯ ಕಾರ್ಯದರ್ಶಿಗಳ ಸೂಚನೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 20:ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ,…

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಪ್ರಾಥಮಿಕ ಹಂತದ ಮಕ್ಕಳು ರಾಧಾ ಕೃಷ್ಣನ ವೇಷದಲ್ಲಿ ಬಂದು ನರ್ತಿಸಿದರೆ, ದ್ವಾಪರ ಯುಗವೇ ಧರೆಗಿಳಿದಂತಾಗಿತ್ತು. ನಂತರ ಪ್ರೌಢಶಾಲೆ ವಿಭಾಗದ ನಾಲ್ಕೂ ಸದನಗಳ ವಿದ್ಯಾರ್ಥಿಗಳಿಗೆ ಮೊಸರಿನ ಮೊಡಕೆ ಒಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪಿರಾಮಿಡ್ ಆಕೃತಿಯಲ್ಲಿ ಒಬ್ಬರ ಮೇಲೊಬ್ಬರು ನಿಂತು, ಮೊಸರಿನ ಮೊಡಕೆ ಒಡೆಯುವ ಸನ್ನೀವೇಶವಂತೂ ಮೈನವಿರೇಳುವಂತೆ ಮಾಡಿತು. ಮೊಸರಿನ…

Read More

ಮಕ್ಕಳಾಗದೆ ಮನನೊಂದು ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಮಕ್ಕಳಾಗದೆ ಮನನೊಂದು ಗೃಹಿಣಿ ಯೊಬ್ಬಳು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಸಂಭವಿಸಿದೆ.ಸ್ಮಿತಾ ರಾಕೇಶ್ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದಕ್ಕೆ ಮಹಿಳೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಬೆಂಗಳೂರಿನ ರಾಕೇಶ ಎಂಬಾತನೊಂದಿಗೆ ಕಳೆದ ಎಂಟು ವರ್ಷಗಳ ಹಿಂದೆ ಸ್ಮಿತಾಳ ಮದುವೆಯಾಗಿತ್ತು.ಒಂದು ತಿಂಗಳ ಹಿಂದೆಯಷ್ಟೇ ಮಹಿಳೆ ನಗರದ ಗಚ್ಚಿನಕಟ್ಟಿ ಕಾಲೋನಿಯ ತವರು ಮನಗೆ ಆಗಮಿಸಿದ್ದಳು.ಮಕ್ಕಳಾಗದಕ್ಕೆ ಒಂದು ತಿಂಗಳಿನಿಂದ ಬಹಳಷ್ಟು ಮನಸ್ಸಿಗೆ ಹಚ್ಚಿಕೊಂಡು ಎರಡು…

Read More

ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ಜಿಲ್ಲೆಯ ಛಾಯಾಗ್ರಾಹಕರ ಮಕ್ಕಳಿಗೆ ೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.೮೦ ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಛಾಯಾಗ್ರಾಹಕರ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸಂಘದಿಂದ ಪ್ರತಿಭಾ ಪುರಸ್ಕಾರ ಮಾಡಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಛಾಯಾಗ್ರಾಹಕರು ತಮ್ಮ ಮಕ್ಕಳ ಪ್ರಸಕ್ತ ಸಾಲಿನ ಶಾಲೆಯ ಧೃಢೀಕೃತ ಎಸ್.ಎಸ್.ಎಲ್.ಸಿ. ಮತ್ತು ಧೃಢೀಕೃತ ಕಾಲೇಜಿನ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಆಧಾರ ಕಾರ್ಡ್, ವಿದ್ಯಾರ್ಥಿಯ ಬ್ಯಾಂಕ್…

Read More

ಇಬ್ರಾಹಿಂಪುರ ಶಾಲೆಯ ಮಕ್ಕಳಿಗೆ ಉಚಿತವಾಗಿ ಸ್ಮಾರ್ಟ್ ಬೋರ್ಡ್, ನೋಟ್ ಬುಕ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ಮುಂಬೈನ ತಾಪಿದಾಸ ತುಳಸಿದಾಸ ವ್ರಜದಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಇಬ್ರಾಹಿಂಪುರ ಬಡಾವಣೆಯ ನಮ್ಮ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂಬರ್ 6 ಮಕ್ಕಳಿಗೆ ಶೈಕ್ಷಣಿಕ ಅಭಿವೃದ್ಧಿಗಾಗಿ ಸ್ಮಾರ್ಟ್ ಬೋರ್ಡ ಹಾಗೂ ನೋಟು ಪುಸ್ತಕಗಳನ್ನು ವಿತರಿಸಲಾಯಿತು.ಚಾರಿಟೇಬಲ್ ಟ್ರಸ್ಟ್ ಸಂಯೋಜಕ ವಿಶ್ವನಾಥ ಸಿಂದಗಿ ಅವರು ಸ್ಮಾರ್ಟ್ ಬೋರ್ಡ್ ಹಾಗೂ ನೋಟ್ ಬುಕ್ ಗಳನ್ನು ಉಚಿತವಾಗಿ ವಿತರಿಸಿದರು.ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗಡಗಿ, ಎಸ್. ಎನ್. ಸಿನ್ನೂರ್, ಎಸ್.ಎಂ. ಬ್ಯಾಹಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ…

Read More

ಮಕ್ಕಳಿಗೆ ಶಿಕ್ಷಕರ ಮಾರ್ಗದರ್ಶನ ಅತ್ಯಗತ್ಯ : ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 30: ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಕಿವಿಮಾತು ಹೇಳಿದರು.ಕೊಲ್ಹಾರ ಪಟ್ಟಣದ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಕಲ್ಪಿಸಲಾಗಿರುವ ಅಗತ್ಯ ಮೂಲಭೂತ ಸೌಲಭ್ಯಗಳು ಸೇರಿದಂತೆ ವಸತಿ ಶಾಲೆಯಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ಸ್ವತ: ತಾವೇ ಊಟ ಬಡಿಸಿ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ನಂತರ, ಮಕ್ಕಳೊಂದಿಗೆ…

Read More

ಮಕ್ಕಳ ಉಜ್ವಲ ಭವಿಷ್ಯ ಸಾಕಾರಕ್ಕೆ ಅಧಿಕಾರಿಗಳು ಸ್ವಯಂಪ್ರೇರಿತರಾಗಿ ವಾರಕ್ಕೊಂದು ಸಲ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ- ಅಧಿಕಾರಿಗಳಿಗೆ ಡಿಸಿ ಸಲಹೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯ ಜಿಲ್ಲೆಯಲ್ಲಿರುವ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಅವರ ಜೀವನ ಸುಂದರಗೊಳಿಸಿಕೊಳ್ಳಲು ಸರ್ಕಾರ ಒದಗಿಸಿರುವ ಸೌಲಭ್ಯಗಳು ಸಮರ್ಪಕವಾಗಿ ದೊರಕುತ್ತಿರುವ ಕುರಿತು ಅಧಿಕಾರಿಗಳು ಸ್ವಯಂಪ್ರೇರಿತವಾಗಿ ವಾರಕ್ಕೊಂದು ಸಲ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ.ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ…

Read More

ಶಾಲಾ ಮಕ್ಕಳಿಗೆ ಒಣದ್ರಾಕ್ಷಿ ಯೋಜನೆ : ವಿಜಯಪುರ ಸಂಪುಟ ಸಭೆಯಲ್ಲಿ ಚರ್ಚೆ: ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27 :ಶಾಲಾ ಮಕ್ಕಳಿಗೆ ಆರೋವರ್ಧಕವಾಗಿರುವ ಒಣದ್ರಾಕ್ಷಿ ವಿತರಣೆ ಕುರಿತು ವಿಜಯಪುರದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಜವಳಿ, ಕೃಷಿ ಮಾರುಕಟ್ಟೆ ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ.ಭಾನುವಾರ ನಗರದಲ್ಲಿ ಮಹಾರಾಷ್ಟ್ರದ ಪುಣೆಯ ರಾಷ್ಟ್ರೀಯ ದ್ರಾಕ್ಷಿ ಬೆಳೆಗಾರರ ಮಹಾಮಂಡಳ, ರಾಷ್ಟ್ರೀಯ ದ್ರಾಕ್ಷಿ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದ್ರಾಕ್ಷಿ ಹಾಗೂ ಒಣದ್ರಾಕ್ಷಿ ಉತ್ಪಾದನೆಯಲ್ಲಿ ಇತ್ತೀಚಿನ ಬೆಳವಣಿಗೆಗಳ ಕುರಿತು ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಅವರು…

Read More