ಪೌರಕಾರ್ಮಿಕರ ಆರೋಗ್ಯ, ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಮೇಯರ್ ಕರಡಿ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23:ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರು ನಗರದ ಬೆನ್ನೆಲುಬಾಗಿದ್ದಾರೆ ಎಂದು ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕೋವಿಡ್ ಸೇರಿದಂತೆ ಸಂಕಷ್ಟದ ಸಂದರ್ಭದಲ್ಲಿಯೂ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸಿದ್ದು, ಅವರ ಸೇವೆಯನ್ನು ಗೌರವಿಸಬೇಕು. ಕರ್ತವ್ಯ ನಿರ್ವಹಿಸುವಾಗ ಸಮವಸ್ತ್ರ, ಮಾಸ್ಕ್…


