ಮೈಸೂರು ಅರಮನೆ ಆವರಣದಲ್ಲಿ ನಡೆದ ಅಂಬಾರಿ ಮೆರವಣಿಗೆಯಲ್ಲಿ ನಾಡ ದೇವಿ ಚಾಮುಂಡೇಶ್ವರಿ ದೇವಿಗೆ ಸಿಎಂ, ಡಿಸಿಎಂ ಪುಷ್ಪಾರ್ಚನೆ

ಸಪ್ತ ಸಾಗರ ವಾರ್ತೆ, ಮೈಸೂರು, ಅ. 2: ಮೈಸೂರು ಅರಮನೆ ಆವರಣದಲ್ಲಿ ವಿಜಯ ದಶಮಿ ನಿಮಿತ್ತ ಗುರುವಾರ ಅಭಿಮನ್ಯು ಹೊತ್ತ ಅಂಬಾರಿಯಲ್ಲಿನ ಚಾಮುಂಡೇಶ್ವರಿ ದೇವಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡಿದರು. ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು, ಸಚಿವರಾದ ಮಹದೇವಪ್ಪ, ಶಿವರಾಜ್ ತಂಗಡಗಿ, ಸಂಸದ ಯದುವೀರ್ ಒಡೆಯರ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಲಕ್ಷೀಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.

Read More

ಸಮಾಜದಅಸಮಾನತೆಹೋಗಲಾಡಿಸಲುಸಮೀಕ್ಷೆಅಗತ್ಯ- ಮುಖ್ಯಮಂತ್ರಿಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ಬೆಂಗಳೂರು, ಅ. 1: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬುಧವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು.ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ…

Read More

ಅತಿವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಹೆಚ್ಚಳಕ್ಕೆ ಸಿಎಂ ಜೊತೆಗೆ ಚರ್ಚೆ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.29 : ಅತಿವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರಿಗೆ ಪ್ರಸ್ತುತ ೫ ಸಾವಿರ ರೂ. ತುರ್ತು ಪರಿಹಾರದ ಜೊತೆಗೆ ಇನ್ನೂ ಹೆಚ್ಚುವರಿಯಾಗಿ ಪರಿಹಾರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳ ಕುರಿತು ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ಅವರು, ಪ್ರವಾಹ ಪರಿಸ್ಥಿತಿ ವೇಳೆ ತುರ್ತು ಪರಿಹಾರ ರೂಪವಾಗಿ…

Read More

ಆಲಮಟ್ಟಿ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 6: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ ಅವರು ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಶನಿವಾರ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು. ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೆಬಿಜೆಎನ್ಎಲ್ ಎಂ.ಡಿ. ಮೋಹನರಾಜ್ ಮತ್ತಿತರರು ಉಪಸ್ಥಿತರಿದ್ದರು.

Read More

ಪಿಪಿಪಿ ಮಾದರಿ ಮೆಡಿಕಲ್ ಕಾಲೇಜ್ ಕೈ ಬಿಡಲು ಒತ್ತಾಯಮುಖ್ಯಮಂತ್ರಿ ಬಳಿ ನಿಯೋಗ ಹೋಗಲು ನಿರ್ಧಾರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಕೈ ಬಿಟ್ಟು ಪೂರ್ಣವಾಗಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ವಿವಿಧ ಸಂಘಟನೆ, ರೈತ ಸಂಘಟನೆಗಳು ಸೇರಿದಂತೆ ಒಂದೇ ವೇದಿಕೆಯಡಿಯಲ್ಲಿ ಹೋರಾಟ ನಡೆಸಲು `ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಸಮಿತಿ’ ಅಸ್ತಿತ್ವಕ್ಕೆ ಬಂದಿದ್ದು, ಈ ಸಮಿತಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಗೆ ನಾಳೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಈ…

Read More

ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 2: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

Read More

ಓದು ಅಭಿಯಾನದಿಂದ ಈದ್ ಮಿಲಾದ ಹಬ್ಬದ ವಿಷಯ ಕೈಬಿಡಿ: ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2:ಪ್ರಾಥಮಿಕ ಶಾಲಾ ಮಕ್ಕಳಿಗೆ 21 ದಿನಗಳ ಓದುವ ಅಭಿಯಾನದಲ್ಲಿ ಈದ್ ಮಿಲಾದ್ ಹಬ್ಬ ಪ್ರಸ್ತಾಪ ಕೈ ಬಿಡುವಂತೆ ಸರ್ಕಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಗ್ರಹಿಸಿದ್ದಾರೆ.ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಒಂದೇ ಕೋಮಿನ ಹಬ್ಬದ ಬಗ್ಗೆ ಓದಿ ಎಂದು ಮಕ್ಕಳಿಗೆ ಹೇಳುವುದು ತಪ್ಪು ಎಂದು ಹೇಳಿದರು.ಸರ್ಕಾರ ತಕ್ಷಣವೇ ಓದು ಅಭಿಯಾನದಿಂದ ಈದ್ ಮಿಲಾದ್ ಹಬ್ಬದ ವಿಷಯ ತೆಗೆದು ಹಾಕುವಂತೆ ಒತ್ತಾಯ ಮಾಡಿದರು.ಹಿಂದೂ ಹಬ್ಬಗಳಾದ ದೀಪಾವಳಿ, ದಸರೆ,ಕ್ರಿಶ್ಚಿಯನ್, ಬೌದ್ಧ, ಜೈನ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ವಿವಾದ: ಸಿಎಂ ಕ್ಷಮೆಯಾಚನೆಗೆ ಆಗ್ರಹ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 29:ಶ್ರೀ ಕ್ಷೇತ್ರ ಧರ್ಮಸ್ಥಳದ ಘನತೆ ಗೌರವಕ್ಕೆ ಮಸಿ ಬಳಿಯುವ ಮೂಲಕ ಹಿಂದೂ ಸಮಾಜಕ್ಕೆ ಅವಮಾನ ಮಾಡುವ ಕಿಡಿಗೇಡಿಗಳ ಷಡ್ಯಂತ್ರವನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸಾರ್ವಜನಿಕರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ನಗರ ಅಧ್ಯಕ್ಷ ಸಂದೀಪ ಪಾಟೀಲ ಒತ್ತಾಯಿಸಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಂತರ ಭಕ್ತಾಧಿಗಳನ್ನು ಹೊಂದಿರುತ್ತದೆ. ಈ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಮಂದಿ ಭಕ್ತಾಧಿಗಳು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ…

Read More

ಏಷಿಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ವಿಜೇತ ಕ್ರೀಡಾಪಟುಗಳಿಗೆ ಸಿಎಂ ಅಭಿನಂದನೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 21:ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವೇಗವಾದ ಸ್ಕೇಟರ್ ಹಾಗೂ ಡಬಲ್ ಸಿಲ್ವರ್ ಪದಕ ವಿಜೇತ ಕ್ರೀಡಾಪಟುಗಳಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು.ಕ್ರೀಡಾಪಟುಗಳಾದ ವೇಗವಾದ ಸ್ಕೇಟರ್ ಧನುಷ್ ಬಾಬು ಮತ್ತು ಸಿಲ್ವರ್ ಪದಕ ವಿಜೇತೆ ಕು. ಪೂರ್ವಿ ಮಠೆ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಧನೆಯನ್ನು ಪ್ರಶಂಶಿಸಿ ಅಭಿನಂದಿಸಿದ್ದಾರೆ.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರೂ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Read More

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ‘ಕನಕರಾಜ’ ಸಿನಿಮಾ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ಬೆಂಗಳೂರು,ಆ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿನಿಮಾದ ಯಶಸ್ಸಿಗೆ ಹಾರೈಸಿ ಶುಭ ಕೋರಿದರು.ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More