ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ: ಬಸ್ ಮುಷ್ಕರ ಹಿಂಪಡೆಯಲು ಮುಖಂಡರಿಗೆ ಸಿಎಂ ಮನವಿ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 4:ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮುಷ್ಕರ ಹಿಂಪಡೆಯಲು ಮುಖಂಡರಿಗೆ ವಿನಂತಿಸಿಕೊಂಡರು.2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ…

Read More

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಜು. 31 :ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅವರು ಈ ವಿಷಯ ತಿಳಿಸಿದರು.ಹಾಗಾಗಿ ಅವರು ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.

Read More

ಗ್ಯಾರಂಟಿಗಳಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿ.ಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಅರಸೀಕೆರೆ, ಜು.26:ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ನುಡಿದರುಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲಿ, ಸದನದಲ್ಲಿ ಕ್ಷೇತ್ರದ ಬಗ್ಗೆ ಧ್ವನಿ ಎತ್ತುವುದರಲ್ಲ ಶಾಸಕ ಶಿವಲಿಂಗೇಗೌಡರು ಮುಂದಿದ್ದಾರೆ. ನಾಲ್ಕು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಅವರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದು…

Read More

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಮೈಸೂರು, ಜು. 20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಭಾನುವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ. ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು…

Read More

ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ : ಬಿಜೆಪಿ, ಜೆಡಿಎಸ್ ಗೆ ಸಿ.ಎಂ. ಸಿದ್ದರಾಮಯ್ಯ ಸವಾಲ್

ಸಪ್ತಸಾಗರ ವಾರ್ತೆ, ಮೈಸೂರು, ಜು. 19:ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ…

Read More

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜು. 18:ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ…

Read More

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜುಲೈ 18: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು…

Read More