ಶ್ರೀ ಕ್ಷೇತ್ರ ಧರ್ಮಸ್ಥಳ ವಿವಾದ: ಸಿಎಂ ಕ್ಷಮೆಯಾಚನೆಗೆ ಆಗ್ರಹ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 29:ಶ್ರೀ ಕ್ಷೇತ್ರ ಧರ್ಮಸ್ಥಳದ ಘನತೆ ಗೌರವಕ್ಕೆ ಮಸಿ ಬಳಿಯುವ ಮೂಲಕ ಹಿಂದೂ ಸಮಾಜಕ್ಕೆ ಅವಮಾನ ಮಾಡುವ ಕಿಡಿಗೇಡಿಗಳ ಷಡ್ಯಂತ್ರವನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸಾರ್ವಜನಿಕರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ನಗರ ಅಧ್ಯಕ್ಷ ಸಂದೀಪ ಪಾಟೀಲ ಒತ್ತಾಯಿಸಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಂತರ ಭಕ್ತಾಧಿಗಳನ್ನು ಹೊಂದಿರುತ್ತದೆ. ಈ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಮಂದಿ ಭಕ್ತಾಧಿಗಳು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ…

Read More

ಏಷಿಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ವಿಜೇತ ಕ್ರೀಡಾಪಟುಗಳಿಗೆ ಸಿಎಂ ಅಭಿನಂದನೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 21:ಕೊರಿಯಾದಲ್ಲಿ ನಡೆದ 20ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವೇಗವಾದ ಸ್ಕೇಟರ್ ಹಾಗೂ ಡಬಲ್ ಸಿಲ್ವರ್ ಪದಕ ವಿಜೇತ ಕ್ರೀಡಾಪಟುಗಳಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಕಚೇರಿಯಲ್ಲಿ ಅಭಿನಂದಿಸಿದರು.ಕ್ರೀಡಾಪಟುಗಳಾದ ವೇಗವಾದ ಸ್ಕೇಟರ್ ಧನುಷ್ ಬಾಬು ಮತ್ತು ಸಿಲ್ವರ್ ಪದಕ ವಿಜೇತೆ ಕು. ಪೂರ್ವಿ ಮಠೆ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಧನೆಯನ್ನು ಪ್ರಶಂಶಿಸಿ ಅಭಿನಂದಿಸಿದ್ದಾರೆ.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರೂ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Read More

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ‘ಕನಕರಾಜ’ ಸಿನಿಮಾ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ಬೆಂಗಳೂರು,ಆ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿನಿಮಾದ ಯಶಸ್ಸಿಗೆ ಹಾರೈಸಿ ಶುಭ ಕೋರಿದರು.ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿ.ಎಂ

ಸಪ್ತಸಾಗರ ವಾರ್ತೆ,ಬೆಂಗಳೂರು ಆ.8:ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ…

Read More

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ: ಬಸ್ ಮುಷ್ಕರ ಹಿಂಪಡೆಯಲು ಮುಖಂಡರಿಗೆ ಸಿಎಂ ಮನವಿ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 4:ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮುಷ್ಕರ ಹಿಂಪಡೆಯಲು ಮುಖಂಡರಿಗೆ ವಿನಂತಿಸಿಕೊಂಡರು.2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ…

Read More

ವಿಜಯಪುರ ಜಿಲ್ಲೆ ಸಚಿವರು, ಶಾಸಕರ ಜೊತೆಗೆ ಸಿಎಂ ಚರ್ಚೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಜು. 31:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆ ಸಚಿವರು, ಶಾಸಕರ ಜೊತೆಗೆ ವಿವಿಧ ಅಭಿವೃದ್ಧಿ ಯೋಜನೆ ಹಾಗೂ ಕಾರ್ಯಕ್ರಮಗಳ ಬಗ್ಗೆ ಗುರುವಾರ ಬೆಂಗಳೂರಿನಲ್ಲಿ ಚರ್ಚಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಸಕ್ಕರೆ ಸಚಿವ ಶಿವಾನಂದ ಪಾಟೀಲ, ಶಾಸಕರಾದ ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Read More

ಧರ್ಮಸ್ಥಳ ಪ್ರಕರಣ: ಸೂಕ್ತ ತನಿಖೆಗೆ ಆಗ್ರಹಿಸಿ ಸಿಎಂಗೆ ಆಮ್ ಆದ್ಮಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 25:ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೊಂದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.ಅನಂತರ ಜಿಲ್ಲಾಧಿಕಾರಿ ಮೂಲಕ ಈ ಬಗ್ಗೆ ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾತನಾಡಿ, ಕರ್ನಾಟಕದ ನಾಗರಿಕರ ಪರವಾಗಿ ಮತ್ತು 2012 ರಲ್ಲಿ ಧರ್ಮಸ್ಥಳದಲ್ಲಿ ಕ್ರೂರವಾಗಿ ಅತ್ಯಾಚಾರ ಮತ್ತು ಕೊಲೆಗೆ…

Read More

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಾನಾ ಸಂಘಟನೆಗಳಿಂದ ಸಿಎಂಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅನೇಕ ಸಂಘಟನೆಗಳ ನೇತೃತ್ವದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಬುಧವಾರ ಮನವಿ ಸಲ್ಲಿಸಲಾಯಿತು.ಪುಣೆ-ವಿಜಯಪುರದ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ, ಅಕ್ಕನ ಅರಿವು, ನೀಲಮ್ಮನ ಬಳಗ, ಶರಣ ಸಾಹಿತ್ಯ ಪರಿಷತ್ತು ಸೇರಿದಂತೆ ಇತರ ಬಸವಪರ ಸಂಘಟನೆಗಳ ಪ್ರಮುಖರು ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಆನಂದ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪುಣೆ-ವಿಜಯಪುರದ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕ…

Read More

ಪ್ರಜಾಪ್ರಭುತ್ವ ಇಲ್ಲ ಎಂಬುವುದು ಉಪ ರಾಷ್ಟ್ರಪತಿಗೆ ಈಗ ಅರ್ಥವಾಗಿದೆ- ಸಚಿವ ಲಾಡ್

ಸಪ್ತಸಾಗರ ವಾರ್ತೆ,ವಿಜಯಪುರ,ಜು. 23:ಪ್ರಜಾಪ್ರಭುತ್ವ ಇಲ್ಲ ಎಂಬುವುದು ಉಪರಾಷ್ಟ್ರಪತಿ ಜಗದೀಪ ಧನಕರ್ ಅವರಿಗೆ ಈಗ ಗೊತ್ತಾಗಿದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ದೇಶದಲ್ಲಿಪ್ರಜಾಪ್ರಭುತ್ವ ಇಲ್ಲ ಎಂದುಉಪರಾಷ್ಟ್ರಪತಿಗಳಿಗೆ ಅದು ಈಗ ಅರ್ಥವಾಗಿದೆ ಎಂದರು.ಈ ದೇಶದ ವ್ಯವಸ್ಥೆಯಲ್ಲಿ ಯಾಕೆ ರಾಜೀನಾಮೆ ಕೊಡಿಸಿದರು.ಅವರಿಗೆ ಒತ್ತಡ ಯಾಕೆ ಬಂದಿದೆ.ಸ್ವ ಇಚ್ಛೆಯಿಂದ ಯಾಕೆ ರಾಜೀನಾಮೆ ಕೊಟ್ಟರು ಎಂದು ಬಿಜೆಪಿಯವರನ್ನು ಕೇಳಬೇಕು ಎಂದರು.ಧರ್ಮಸ್ಥಳ ಸರಣಿ ಕೊಲೆ ಆರೋಪ ಕುರಿತು…

Read More

ನಾನು ಯಾವತ್ತೂ ಸಿಎಂ ಹುದ್ದೆ ಕ್ಲೇಮ್ ಮಾಡಿಯೇ ಇಲ್ಲ : ಸಚಿವ ಸತೀಶ ಜಾರಕಿಹೊಳಿ

ಸಪ್ತ ಸಾಗರ ವಾರ್ತೆ ವಿಜಯಪುರ, ಜು.22:ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಬೇಕು ಎಂದರು.ಸಿಎಂ ಈಗಾಗಲೇ ನಾನೇ 5 ವರ್ಷ ಇರ್ತಿನಿ ಎಂದಿದ್ದಾರೆ. ಸಿಎಂ ಜಾಗ ಖಾಲಿ ಇಲ್ಲ‌ ಎಂದು ಸ್ವತಃ ಡಿಸಿಎಂ ಹೇಳಿದ್ದಾರೆ.ಅವರೇ ಹೊಂದಾಣಿಕೆ ಆಗಿದ್ದಾರೆ. ನಾವು ಹೇಳುವುದು ಏನು ಇಲ್ಲ ಎಂದು ತಿಳಿಸಿದರು.ಸತೀಶ ಅಭಿಮಾನಿಗಳಿಂದ ಸಿಎಂ ಘೋಷಣೆ ವಿಚಾರವಾಗಿ…

Read More