ಕಾಮನ್‌ವೆಲ್ತ್‌ನಲ್ಲಿ ಬೆಳ್ಳಿ ಗೆದ್ದ ಸಚಿನ ಸಾಳುಂಕೆಗೆ ಸನ್ಮಾನ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 18:ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಬಬಲೇಶ್ವರ ತಾಲೂಕಿನ ತಿಗಣಿ ಬಿದರಿ ಗ್ರಾಮದ ಕ್ರೀಡಾಪಟು ಸಚೀನ ತುಕಾರಾಮ ಸಾಳುಂಕೆ ಅವರನ್ನು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಭಾನುವಾರ ನಗರದಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ, ಸಚೀನ ಸಾಳುಂಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿಜಯಪುರ ಜಿಲ್ಲೆ ಹಾಗೂ ಬಬಲೇಶ್ವರ ತಾಲೂಕಿನ ಕೀರ್ತಿ ಹೆಚ್ಚಿಸಿರುವುದು…

Read More