ಬೆಳೆ ಪರಿಹಾರ ತಾರತಮ್ಯ ಖಂಡಿಸಿ ರೈತರಿಂದ ಆಕ್ರೋಶ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 9 : ಬೆಳೆ ಹಾನಿ ಪ್ರಮಾಣ ಹೆಚ್ಚಾಗಿದ್ದರೂ ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ, ಅಸಮರ್ಪಕ ಹಾಗೂ ಅನ್ಯಾಯಯುತವಾದ ಕ್ರಮಗಳನ್ನು ಅನುಸರಿಸಿರುವುದನ್ನು ಹಾಗೂ ಇನ್ನೂ ಕೆಲ ರೈತರಿಗೆ ಪರಿಹಾರ ಹಣವನ್ನು ಜಮಾ ಮಾಡದೇ ಇರುವುದನ್ನು ಖಂಡಿಸಿ ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ರೈತರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ವ್ಯಾಪಕ ಮಳೆಯಾಗಿದ್ದರ ಪರಿಣಾಮ ಸರ್ಕಾರ ರೈತರಿಗೆ ಬೆಳೆ ಪರಿಹಾರ…

Read More

ಅಗ್ನಿ ದುರಂತ ಹಾನಿಗೆ ಪರಿಹಾರ:ದುಷ್ಕೃತ್ಯದ ಬಗ್ಗೆ ತನಿಖೆಗೆ ಆದೇಶ- ಸಚಿವ ಶಿವಾನಂದ ಪಾಟೀಲ ಹೇಳಿಕೆ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ನ. 14: ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್‌ ಲಿಮಿಟೆಡ್‌ ಬಳಿ ಗುರುವಾರ ಸಂಭವಿಸಿದ ಅಹಿತಕರ ಘಟನೆಯಲ್ಲಿ ಸಂಭವಿಸಿದ ಹಾನಿಗೆ ಸಾಧ್ಯವಿರುವ ಪರಿಹಾರ ನೀಡಲಾಗುವುದು ಹಾಗೂ ದುರಂತದ ಬಗ್ಗೆ ತನಿಖೆಗೆ ಆದೇಶ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರಕಟಿಸಿದರು.ದುರಂತದ ಸ್ಥಳಕ್ಕೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.‌ಬಿ. ತಿಮ್ಮಾಪುರ ಅವರೊಂದಿಗೆ ಭೇಟಿ ನೀಡಿ ದುರಂತದಲ್ಲಿ ಹಾನಿಗೀಡಾದ ಕಬ್ಬು, ಟ್ರ್ಯಾಕ್ಟರ್‌ಗಳು, ಬೈಕ್‌ಗಳನ್ನು ವೀಕ್ಷಣೆ ಮಾಡಿ ರೈತರ…

Read More

ಯುಕೆಪಿ 3ನೇ ಹಂತದ ಅನುಷ್ಠಾನಕ್ಕೆ ಸಮರ್ಪಕ ಪರಿಹಾರ ನಿಗದಿ ಅನುಕೂಲ: ಸಚಿವ ಎಂ.ಬಿ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 23:ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಸಂತ್ರಸ್ತರಿಗೆ ಸರಕಾರ ಒಪ್ಪಿಗೆ ಸೂತ್ರದಡಿ ಸಮರ್ಪಕ ಪರಿಹಾರ ಘೋಷಣೆ ಮಾಡಿದ್ದು, ಇದರಿಂದ ಆಲಮಟ್ಟಿ ಜಲಾಷಯದ ಎತ್ತರವನ್ನು ಹೆಚ್ಚಿಸಿ ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತೀತರ ಜಿಲ್ಲೆಗಳ ಬಾಕಿ ಭೂಮಿಗೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ದೇವರ ಗಣ್ಣೂರಿನಲ್ಲಿ ಕೃಷ್ಣ ಮೇಲ್ದಂಡೆ ಹಂತ-3ರ ಯೋಜನಾ ಸಂತ್ರಸ್ತರಿಗೆ…

Read More

ಯುಕೆಪಿ 3ನೇ ಹಂತದ ಯೋಜನೆ: ಮುಳುಗಡೆಯಾಗುವ ಪ್ರತಿ ಎಕರೆ ಭೂಮಿಗೆ 30-40 ಲಕ್ಷ ಪರಿಹಾರ ನಿಗದಿ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.16:“ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಡಿ ಮುಳುಗಡೆಯಾಗುವ ಪ್ರತಿ ಎಕರೆ ನೀರಾವರಿ ಜಮೀನಿಗೆ ರೂ.40 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.30 ಲಕ್ಷ. ಕಾಲುವೆಗಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿ ಪೈಕಿ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ ರೂ.30 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.25 ಲಕ್ಷ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂಸ್ವಾಧೀನ…

Read More