ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಅಸಂಘಟಿತ ಕಾರ್ಮಿಕರ ಜೀವನ ಮಟ್ಟ ಸುಧಾರಣೆಗೆ ಕ್ರಮ : ಸಚಿವ ಸಂತೋಷ ಲಾಡ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ವಿವಿಧ ಸಣ್ಣ ವೃತ್ತಿ ಕೈಗೊಂಡು, ವೃತ್ತಿಯನ್ನೇ ಅವಲಂಬಿಸಿ ಶ್ರಮಿಜೀವಿಯಾಗಿ ತಮ್ಮ ಜೀವನ ನಿರ್ವಹಿಸುತ್ತಿರುವ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಸರ್ಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯದಾದ್ಯಂತ ವಿವಿಧ ವೃತ್ತಿಗಳಲ್ಲಿ ತೊಡಗಿರುವ 91 ಅಸಂಘಟಿತ ವರ್ಗಗಳ…

Read More

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಮೈಸೂರು, ಜು. 20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಭಾನುವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ. ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು…

Read More

ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ : ಬಿಜೆಪಿ, ಜೆಡಿಎಸ್ ಗೆ ಸಿ.ಎಂ. ಸಿದ್ದರಾಮಯ್ಯ ಸವಾಲ್

ಸಪ್ತಸಾಗರ ವಾರ್ತೆ, ಮೈಸೂರು, ಜು. 19:ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ…

Read More

ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಸಾಲದ ಸುಳಿಗೆ ನೂಕಿದ್ದಾರೆ- ಯತ್ನಾಳ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16: ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಬೇಕಾಗಿದ್ದ ಸರ್ಕಾರವು ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕೆ ನಷ್ಟಕ್ಕೆ ನೂಕಿದೆ. ಭವಿಷ್ಯ ನಿಧಿ (ಪಿ.ಎಫ್) ಪಾವತಿ ಮಾಡುವುದಕ್ಕೂ ಹಣವಿಲ್ಲದೆ ಈಗ ಅದಕ್ಕೂ ಸಾಲ ಮಾಡಲು ನಿರ್ಧರಿಸಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.ಎರಡು ದಿನಗಳ ಹಿಂದೆಯಷ್ಟೇ ‘ಶಕ್ತಿ’ ಯೋಜನೆಯ ಬಗ್ಗೆ ಸರ್ಕಾರ ಎಲ್ಲಾ ಪತ್ರಿಕೆಗಳಲ್ಲಿ, ಜಾಲತಾಣಗಳಲ್ಲಿ ಯೋಜನೆಯ ಯಶಸ್ಸಿನ ಬಗ್ಗೆ ಜಾಹೀರಾತು ನೀಡಿತ್ತು. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ…

Read More

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಳವಾಡ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ, ಸದಸ್ಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ಜಿಲ್ಲೆಯ ಬಸವನ ಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಜಯಪುರ ನಗರದಲ್ಲಿರುವ ಸಚಿವ ಶಿವಾನಂದ ಪಾಟೀಲ ಅವರ ಗೃಹ ಕಛೇರಿಗೆ ಆಗಮಿಸಿದ ಮುಳವಾಡ ಗ್ರಾಮ ಪಂಚಾಯತಿ ಬಿಜೆಪಿ ಸದಸ್ಯರು ಅಧ್ಯಕ್ಷ ಬಾಳು ಚಿನಕೇಕರ, ಉಪಾಧ್ಯಕ್ಷೆ ಮಧುಮತಿ ಧನ್ಯಾಳ, ಗ್ರಾಮ ಪಂಚಾಯತಿ…

Read More

ನಮ್ಮದು ಅಭಿವೃದ್ಧಿ ಪರ ಸರ್ಕಾರ: ಸಿದ್ದರಾಮಯ್ಯ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ಜು. 14:ನಮ್ಮದು ಅಭಿವೃದ್ಧಿಪರ ಸರ್ಕಾರ. ಬಿಜೆಪಿ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.4157…

Read More