ಬಸವನ ಬಾಗೇವಾಡಿಯಲ್ಲಿ ಇಂಧನ, ಅಡುಗೆ ಅನಿಲ ಕೃತಕ ಅಭಾವ: ದಾಸ್ತಾನು ಪರಿಶೀಲಿಸಲು ಶಂಕರಗೌಡ ಬಿರಾದಾರ ಆಗ್ರಹ
ಸಪ್ತಸಾಗರ ವಾರ್ತೆ,ಬಸವನಬಾಗೇವಾಡಿ, ಮೇ. 20:ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್, ಡೀಸೆಲ್ ಹಾಗೂ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೃತಕ ಅಭಾವ ಸೃಷ್ಟಿಯಾಗುತ್ತಿದ್ದು, ಸಾರ್ವಜನಿಕರು, ರೈತರು ಹಾಗೂ ಬಡ ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಪಟ್ಟಣದ ಪೆಟ್ರೋಲ್ ಬಂಕ್‌ಗಳಲ್ಲಿ ಸಕಾಲಕ್ಕೆ ಇಂಧನ ಸಿಗದೆ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಗಳಿಗಾಗಿ ಡೀಸೆಲ್ ನಂಬಿಕೊಂಡಿರುವ ರೈತರು ನಿತ್ಯ ಪರದಾಡುವಂತಾಗಿದೆ. ಇನ್ನೊಂದೆಡೆ,…


