
ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕೊನೆಹಾಕಿ ಸೂಕ್ತ ಭದ್ರತೆ ಒದಗಿಸಲು ಆಗ್ರಹಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ ನಡೆಸಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ಸಾಂಸ್ಕೃತಿಕ ಸಂಘಟನೆ ಸಮಿತಿಯ ಕರೆಯ ಮೇರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸಂಘಟನೆಯು ದೇಶದಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಮಹಿಳೆಯರ ಘನತೆಯ ಬದುಕಿಗಾಗಿ…