ಬಿಎಲ್‌ಡಿಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಸೆಕ್ಯೂರಿಟಿ ಸೆಂಟರ್ ಆಫ್ ಎಕ್ಸೆಲೆನ್ಸ್ ಉದ್ಘಾಟನೆ
ಸಪ್ತಸಾಗರ ವಾರ್ತೆ ವಿಜಯಪುರ, ಜು. 21:ಸೈಬರ್ ಭದ್ರತಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ಉದ್ಯಮದ ಅಗತ್ಯಗಳಿಗೆ ತಕ್ಕಂತೆ ಸಜ್ಜುಗೊಳಿಸುವ ಮಹತ್ವದ ಹೆಜ್ಜೆಯಾಗಿ, ಬಿಎಲ್‌ಡಿಇ ಸಂಸ್ಥೆಯ ವಿ.ಪಿ. ಡಾ. ಪಿ.ಜಿ. ಹಳಕಟ್ಟಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಅಮೆರಿಕ ಮೂಲದ ಬರಾಕುಡಾ ನೆಟ್‌ವರ್ಕ್ಸ್ ಸಂಸ್ಥೆಯೊಂದಿಗೆ ಪರಸ್ಪರ ಸಹಕಾರ ಒಪ್ಪಂದ (MoU)ಕ್ಕೆ ಸಹಿ ಹಾಕಿ, ಬರಾಕುಡಾ ಬೆಂಬಲಿತ ಸೈಬರ್ ಸೆಕ್ಯೂರಿಟಿ ಸೆಂಟರ್ ಆಫ್ ಎಕ್ಸೆಲೆನ್ಸ್ ಅನ್ನು ಉದ್ಘಾಟಿಸಿತು.ಸೈಬರ್ ಭದ್ರತಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಬರಾಕುಡಾ ನೆಟ್‌ವರ್ಕ್ಸ್, ಕೌಶಲ್ಯಾಭಿವೃದ್ಧಿ, ವಿಶೇಷ ತರಬೇತಿ, ಹ್ಯಾಕಥಾನ್,…


