ಬಿಜೆಪಿ ಸರ್ಕಾರವೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.11:ಬಿಜೆಪಿ ತನ್ನ ಆಡಳಿತ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಕೇಳಿದಾಗ, “ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಬಹುದು ಎಂದು ಕಾನೂನು ತಂದಿದೆ. ಚುನಾವಣಾ ಆಯೋಗದ ಉಪಕಾನೂನಿನಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಜಿಬಿಎ ಕಾಯ್ದೆ ಜಾರಿಗೆ ತರುವಾಗ, ಬಿಜೆಪಿ…

Read More

ಯುಕೆಪಿ ಮೂರನೇ ಹಂತದ ಯೋಜನೆ ಕುರಿತು ಡಿಸಿಎಂ ಡಿಕೆಶಿ ಚರ್ಚೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 3:ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಬುಧವಾರ ಸಭೆ ನಡೆಸಿದರು.ಭೂಸ್ವಾಧೀನ, ಪುನರ್ವಸತಿ, ಪುನರ್‌ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂ ಪರಿಹಾರ ಕೋರಿ ದಾಖಲಿಸಿರುವ ಪ್ರಕರಣಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.ಸಚಿವರಾದ ಪ್ರಿಯಾಂಕ್ ಖರ್ಗೆ, ಬೋಸರಾಜ್, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ದರ್ಶನಪೂರ್, ಡಿ. ಸುಧಾಕರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Read More

ನಾಗರಿಕಸ್ನೇಹಿಸೇವೆ, ಉತ್ತಮಆಡಳಿತ, ಯೋಜನೆಗಳಪರಿಣಾಮಕಾರಿಜಾರಿಗಾಗಿಜಿಬಿಎಅಸ್ತಿತ್ವಕ್ಕೆ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.2:“ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.“02-09-2025ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ,…

Read More