ಕೃಷ್ಣಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ : ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ -ಮುಖ್ಯಮಂತ್ರಿ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.6: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ಶನಿವಾರ ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಪರಿಹಾರ ಕೋರಿ ನ್ಯಾಯಾಲಯದ…

Read More

ಆಲಮಟ್ಟಿ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 6: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ ಅವರು ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಶನಿವಾರ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು. ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೆಬಿಜೆಎನ್ಎಲ್ ಎಂ.ಡಿ. ಮೋಹನರಾಜ್ ಮತ್ತಿತರರು ಉಪಸ್ಥಿತರಿದ್ದರು.

Read More

ಸೆ.6ರಂದು ಆಲಮಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಕೃಷ್ಣಗೆ ಬಾಗಿನ ಅರ್ಪಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಆಲಮಟ್ಟಿಯ ಲಾಲ್ ಬಹಾದ್ದೂರ್‌ಶಾಸ್ತ್ರಿ ಜಲಾಶಯ ಈಗ ಭರ್ತಿಯಾಗಿದ್ದು, ಹೀಗಾಗಿ ಉತ್ತರ ಕರ್ನಾಟಕದ ಜೀವನದಿ ಕೃಷ್ಣಗೆ ಸೆ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ಕೆಬಿಜೆಎನ್‌ಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ ಎರಡನೆಯ ವಾರದವರೆಗೆ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ವ್ಯಾಪಕ ಮಳೆಯಾಗಿ ಕೃಷ್ಣೆಯ ಮುಖ್ಯ ಹರಿವು ಹಾಗೂ ಅದರ ಉಪನದಿಗಳಲ್ಲಿ ಅಪಾರ ಪ್ರಮಾಣದ ನೀರು ಬಂದಿರುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ.ಜನ, ಜಾನುವಾರಗಳಿಗೆ ಜೀವ ಹಾನಿಯಾಗದಿರಲಿ ಎನ್ನುವ ಉದ್ದೇಶದಿಂದ ಕರ್ನಾಟಕ ಹಾಗೂ…

Read More