ದಾಂಡೇಲಿ ಜಿಪ್‌ಲೈನ್ ದುರಂತ: 30–40 ಅಡಿ ಎತ್ತರದಿಂದ ಬಿದ್ದು ವಿಜಯಪುರದ ಯುವಕ ಗಂಭೀರ ಗಾಯ
ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ಪ್ರವಾಸದ ಸಂಭ್ರಮಕ್ಕಾಗಿ ದಾಂಡೇಲಿಯ ಸ್ಟರ್ಲಿಂಗ್ ರಿವರ್ ರೆಸಾರ್ಟ್‌ಗೆ ತೆರಳಿದ್ದ ವಿಜಯಪುರ ನಗರದ ಯುವಕ ಕುಬೇರ ಸುರಪುರ ಜಿಪ್‌ಲೈನ್ ಚಟುವಟಿಕೆ ವೇಳೆ ಸಂಭವಿಸಿದ ಭೀಕರ ಅವಘಡದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ. ಜಿಪ್‌ಲೈನ್‌ನ ಲಾಕ್ ಕಟ್ ಆಗಿದ್ದರಿಂದ ಸುಮಾರು 30 ರಿಂದ 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಪರಿಣಾಮ ಅವರ ಎರಡೂ ಕೈ ಹಾಗೂ ಎರಡೂ ಕಾಲುಗಳ ಎಲುಬುಗಳು ಮುರಿದು, ನರಗಳಿಗೂ ಗಂಭೀರ ಹಾನಿಯಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.ಕಳೆದ ಜುಲೈ 3ರಂದು ಕುಬೇರ ಸುರಪುರ ಅವರು ತಮ್ಮ…


