ವಿಜಯಪುರ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ಸದಸ್ಯರ ಪಟ್ಟಿ ಬಿಡುಗಡೆಗೊಳಿಸಿ, ವಾರ್ಡ್ವಾರು ಸಭೆ ನಡೆಸಿ:ದಾನೇಶ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 13:ಶಾಸನಾತ್ಮಕ ಹಾಗೂ ಸಂವಿಧಾನಬದ್ಧವಾಗಿ ರಚನೆಯಾಗಿರುವ ವಾರ್ಡ್ ಸಮಿತಿಗಳು ನಗರದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಜನರ ಪಾಲ್ಗೊಳ್ಳುವಿಕೆಯಿಂದ ವಾರ್ಡ್ಗಳ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಕೂಡಲೇ ವಿಜಯಪುರ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ಸದಸ್ಯರ ಅಂತಿಮ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿ, ಪ್ರತಿ ವಾರ್ಡ್ನಲ್ಲಿ ನಿಯಮಿತವಾಗಿ ಸಭೆಗಳನ್ನು ನಡೆಸಬೇಕು ಎಂದು ವಾರ್ಡ್ ಸಮಿತಿ ಜಿಲ್ಲಾ ಸಂಚಾಲಕ, ನ್ಯಾಯವಾದಿ ದಾನೇಶ ಅವಟಿ ಆಗ್ರಹಿಸಿದರು.ಗುರುವಾರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರನ್ನು ಭೇಟಿ ಮಾಡಿ ಮನವಿ…


