ಕರಡು ಮತದಾರರ ಪಟ್ಟಿ ಪ್ರಕಟ. ಹೆಸರು ಪರಿಶೀಲಿಸಿಕೊಳ್ಳಿ; ಸೆ.23ರೊಳಗೆ ಹಕ್ಕು-ಆಕ್ಷೇಪಣೆ ಸಲ್ಲಿಸಿ. ಜಿಲ್ಲಾಧಿಕಾರಿ ಡಾ. ಆನಂದ ಕೆ. ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.1: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಅಡಿಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಜಿಲ್ಲೆಯ ಪ್ರತಿಯೊಬ್ಬ ಮತದಾರರು ಪರಿಶೀಲಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಮನವಿ ಮಾಡಿದ್ದಾರೆ.ಚುನಾವಣಾ ಆಯೋಗದ ನಿರ್ದೇಶನದಂತೆ ಆ.24ರಂದು ಜಿಲ್ಲೆಯ ಎಲ್ಲ ತಹಶೀಲ್ದಾರರ ಕಚೇರಿ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಲ್ಲದೆ, ಆಯಾ ಮತಕ್ಷೇತ್ರಗಳ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳ ಬಳಿಯೂ ಪಟ್ಟಿ ಲಭ್ಯವಿದ್ದು, ಮತದಾರರು ಪರಿಶೀಲಿಸಬಹುದಾಗಿದೆ.ಕರಡು ಪಟ್ಟಿಯಲ್ಲಿ ಅರ್ಹ…

Read More

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಶೋಷಿತ, ಹಿಂದುಳಿದ ವರ್ಗಗಳ ಏಳಿಗೆಗೆ ಕ್ರಾಂತಿಕಾರಿ ಕೊಡುಗೆ: ಡಾ. ಆನಂದ ಕೆ. ಸಪ್ತಸಾಗರ ವಾರ್ತೆ,ವಿಜಯಪುರ, ಆ.20:ಶೋಷಿತ, ದಮನಿತ ಹಾಗೂ ದೀನ-ದಲಿತ ಸಮುದಾಯಗಳ ಸಮಗ್ರ ಏಳಿಗೆಗಾಗಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ರೂಪಿಸಿ ಜಾರಿಗೆ ತಂದ ಕ್ರಾಂತಿಕಾರಿ ಯೋಜನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಸಾಮಾಜಿಕ ಪರಿವರ್ತನೆಯ ಹರಿಕಾರ,…

Read More

ಸಂಗೊಳ್ಳಿ ರಾಯಣ್ಣನವರ ಧೈರ್ಯ, ಸ್ಥೈರ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ ಡಾ. ಆನಂದ ಕೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.15 :ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಧೈರ್ಯ, ದೇಶಪ್ರೇಮ, ಸ್ವಾಭಿಮಾನ ಹಾಗೂ ಹೋರಾಟದ ಮನೋಭಾವವನ್ನು ಇಂದಿನ ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರು ರಾಯಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.ಸ್ವಾತಂತ್ರ್ಯ ಹೋರಾಟದಲ್ಲಿ ಸಂಗೊಳ್ಳಿ ರಾಯಣ್ಣ ಅವರು ಅಪ್ರತಿಮ ಸಾಹಸ,…

Read More

ಶೀತಲಗೃಹ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.13:ತಿಕೋಟಾ ತಾಲ್ಲೂಕಿನ ತೊರವಿ ಗ್ರಾಮದ ಬಳಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಮಂಡಳಿಯಿಂದ ನಿರ್ಮಾಣವಾಗುತ್ತಿರುವ ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.ಒಟ್ಟು 141 ಎಕರೆ ಗುಂಟೆ ವಿಸ್ತೀರ್ಣ ಹೊಂದಿರುವ ದ್ರಾಕ್ಷಿ ಮತ್ತು ವೈನ್ ಮಂಡಳಿಯ ಆವರಣದಲ್ಲಿ ತಂತಿಬೇಲಿ, ರಸ್ತೆ ಹಾಗೂ 10 ಬೋರ್‌ವೆಲ್‌ಗಳ ವ್ಯವಸ್ಥೆ ಮಾಡಲಾಗಿದೆ. ನಬಾರ್ಡ್ ಯೋಜನೆಯಡಿ ಸುಮಾರು 10 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲಗೃಹ ನಿರ್ಮಾಣವಾಗುತ್ತಿದ್ದು, ಇನ್ನೂ 2ರಿಂದ 3 ತಿಂಗಳಲ್ಲಿ ಕಾಮಗಾರಿ…

Read More

ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಡಿಸಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ ವಿಜಯಪುರ, ಜು.21:ದೋಷರಹಿತ, ಪಾರದರ್ಶಕ ಹಾಗೂ ನಿಖರ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರ ಸಕ್ರಿಯ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಸುಗಮವಾಗಿ ನಡೆಯುತ್ತಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಲ್ಲರೂ…

Read More

ಡಿ. 7ರಂದು ವೃಕ್ಷಥಾನ್ ಓಟ ಹಾಗೂ ಟಿಇಟಿ ಪರೀಕ್ಷೆ: ಸಾರ್ವಜನಿಕ ಸಂಚಾರ ಮಾರ್ಗ ಬದಲಿಸಿ ಡಿಸಿ ಡಾ. ಆನಂದ ಕೆ. ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.5: ಡಿ. 7ರಂದು ನಗರದಲ್ಲಿ ವೃಕ್ಷಥಾನ್ ಓಟ ಹಾಗೂ ಅದೇ ದಿನ ಟಿ.ಇ.ಟಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವೃಕ್ಷಥಾನ್ ಓಟಗಾರರಿಗೆ ಹಾಗೂ ಟಿಇಟಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಹಾಲಿ ಜಾರಿಯಲ್ಲಿರುವ ಸಾರ್ವಜನಿಕ ರಸ್ತೆ ಸಂಚಾರಿ ಮಾರ್ಗಗಳನ್ನು ಡಿ. 7ರ ಬೆಳಿಗ್ಗೆ 4 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.ವೃಕ್ಷಥಾನ ಹೆರಿಟೇಜ್ ರನ್ ಪ್ರಯುಕ್ತ ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳುಜಮಖಂಡಿಯಿಂದ…

Read More