
ಬೆಳೆ ಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಕೈ ಬಿಟ್ಟುಹೋಗದಂತೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕೆಲವು ತಾಲೂಕಿನಲ್ಲಿ ರೈತರ ಬೆಳೆ ಹಾನಿಯಾಗಿದ್ದು, ಅತಿವೃಷ್ಟಿಯಿಂದಾಗಿ ಬೆಳೆ ಹಾನಿ ಕುರಿತು ಕೈಗೊಂಡ ಜಂಟಿ ಸಮೀಕ್ಷೆಯಲ್ಲಿ ಯಾವುದೇ ಅರ್ಹ ರೈತರ ಜಮೀನು ಕೈಬಿಟ್ಟು ಹೋಗದಂತೆ ನಿಗಾವಹಿಸಿ ಸರ್ಮಪಕ ಸಮೀಕ್ಷೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಳೆ ಹಾನಿ ಸಮೀಕ್ಷೆಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು….