ನಿಡಗುಂದಿ ತಾಲೂಕಾ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ
ಸಪ್ತಸಾಗರ ವಾರ್ತೆ, ವಿಜಯಪುರ ಅ.15: ಜಿಲ್ಲೆಯ ನಿಡಗುಂದಿ ತಾಲೂಕಿನ ತಹಶೀಲ್ದಾರ ಕಚೇರಿ, ನ್ಯಾಯಬೆಲೆ ಅಂಗಡಿ, ಅಂಗನವಾಡಿ-ಗ್ರಾಮ ಒನ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಡಗುಂದಿ ತಹಶೀಲ್ದಾರ ಕಚೇರಿ ಹಾಗೂ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕಾರ್ಯಗಳಿಗೆ ಸ್ಪಂದಿಸಬೇಕು. ಸಕಾಲ ಅರ್ಜಿಗಳನ್ನು ಕೂಡಲೇ ವಿಲೇ ಮಾಡಬೇಕು. ಯಾವುದೇ ಬಾಕಿ ಕಡತಗಳನ್ನು ಉಳಿಸಿಕೊಳ್ಳದೇ…


