ನಿವೃತ್ತ ಯೋಧನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ನಿವೃತ್ತ ಯೋಧನ ಮೇಲೆ ಮಾರಕಾಸ್ತ್ರಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಜಿಲ್ಲೆಯ ಇಂಡಿ ನಗರದ ಕೆಇಬಿ ಎದುರಿಗಿನ ಮಸೂತಿ ಹತ್ತಿರ ನಡೆದಿದೆ.ಇಂಡಿ ತಾಲೂಕಿನ ಹಿರೇ ಮಸಳಿ ಗ್ರಾಮದ ನಿವೃತ್ತ ಯೋಧ ಮಾರುತಿ ಕ್ಷತ್ರಿ (45)ಎಂಬ ವ್ಯಕ್ತಿಯ ಮೇಲೆ ಭೀಕರ ಹಲ್ಲೆ ನಡೆದಿದೆ.ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೂವರು ಮುಸುಕುಧಾರಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದ್ದಾರೆ.ಇಂಡಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಜಮೀನು ಆಸ್ತಿ ವಿವಾದ: ಮಾರಕಾಸ್ತ್ರಗಳಿಂದ ಆರು ಜನರ ಭೀಕರ ಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 30:ಜಮೀನು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಶುಕ್ರವಾರ ಸಂಜೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.ಚಂದು ನಿರಾಳೆ(56), ದುಂಡಪ್ಪ ನಿರಾಳೆ(65), ಶಿವಪುತ್ರ ನಿರಾಳೆ(60), ರಾಹುಲ್ ನಿರಾಳೆ(35), ಸಮರ್ಥ ನಿರಾಳೆ(24), ಶಬ್ಬೀರ್ ನದಾಫ್(50) ಕೊಲೆಯಾದವರು.ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಇತರ ಪೊಲೀಸ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ….

Read More