ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಪ್ರಸ್ತಾವನೆ ಕೈಬಿಡಿ: ಹೋರಾಟ ಸಮಿತಿ ಒತ್ತಾಯ

ಸಪ್ತ ಸಾಗರ ವಾರ್ತೆ, ವಿಜಯಪುರ,ಆ. 31:ವಿಜಯಪುರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕೈ ಬಿಟ್ಟು ಸಂಪೂರ್ಣವಾಗಿ ಸರ್ಕಾರವೇ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಹೋರಾಟ ಸಮಿತಿ ನಿಯೋಗ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿತು.ಹೋರಾಟ ಸಮಿತಿ ಪದಾಧಿಕಾರಿಗಳ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ ಅವರ ಬಳಿ ತೆರಳಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕಿ ಕಾಲೇಜ್ ಸ್ಥಾಪಿಸಬೇಕು ಎಂದು ಕೇಳಿಕೊಳ್ಳಲಾಯಿತು.ಸರಕಾರಿ ವೈದ್ಯಕೀಯ ಕಾಲೇಜು…

Read More

ಓದುವ ಅಭಿಯಾನದಲ್ಲಿ ಒಂದು ಕೋಮಿನ ಹಬ್ಬಗಳ ಪರಿಚಯ ತೆಗೆದು ಹಾಕಿ: ಶಾಸಕ ಯತ್ನಾಳ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿರುವ ಒಂದು ಕೋಮಿನ ಹಬ್ಬದ ತಿಳಿವಳಿಕೆ ವಿಷಯವನ್ನು ಕೂಡಲೇ ತೆಗೆದು ಹಾಕಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಒತ್ತಾಯಿಸಿದ್ದಾರೆ.21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿ ಒಂದು ಕೋಮಿನ ಹಬ್ಬವನ್ನು ತಿಳಿದುಕೊಳ್ಳಲು ನಿರ್ದೇಶಿಸಲಾಗಿದೆ. ಓದುವ ಅಭಿಯಾನವನ್ನು ಸರ್ಕಾರ ಪರಿಚಯಿಸಿದ್ದರೆ ಅದರಲ್ಲಿ ಪ್ರಚಲಿತ ವಿದ್ಯಮಾನ, ಕನ್ನಡ ಸಾಹಿತ್ಯ, ವಿಜ್ಞಾನ, ನಮ್ಮ ಸಂಸ್ಕೃತಿ, ಇತಿಹಾಸವನ್ನು ಓದಲು ಉತ್ತೇಜಿಸಬೇಕೇ ಹೊರತು ಯಾವುದೋ ಒಂದು ಕೋಮಿನ…

Read More

ಕುರಿಗಾರರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30:ಅರಣ್ಯ ಇಲಾಖೆಯಿಂದ ಕುರಿಗಾರರ ಮೇಲೆ ಆಗುತ್ತಿರುವ ಕಿರುಕುಳ, ದೌರ್ಜನ್ಯ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕುರಿಗಾರರ ಸಂಘದ ಅಧ್ಯಕ್ಷ ಬೀರಪ್ಪ ಜುಮನಾಳ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.ಕೆಲವು ಕಡೆ ಅರಣ್ಯ ಪ್ರದೇಶಗಳಲ್ಲಿ ವಿನಾಕಾರಣ ಕುರಿಗಾರರ ಮೇಲೆ ದಬ್ಬಾಳಿಕೆ, ಬಲತ್ಕಾರ ನಡೆದಿರುವುದು ಕಂಡುಬರುತ್ತದೆ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ತಮ್ಮ ಸಿಬ್ಬಂದಿಗಳಿಗೆ ಸರ್ಕಾರದ ನೀತಿ ನಿಯಮಗಳ ಹೊರತುಪಡಿಸಿ ನಮ್ಮ ಕುರಿಗಾರರೊಂದಿಗೆ ಸಂಘರ್ಷಕ್ಕೆ ಇಳಿಯಬಾರದು ಎಂದು ಸೂಕ್ತ ತಿಳುವಳಿಕೆ ನೀಡಬೇಕೆಂದು ಅವರು ಕೇಳಿಕೊಂಡಿದ್ದಾರೆ.ಕುರಿಗಾರರು ಅನಕ್ಷರಸ್ಥರು, ಮುಗ್ಧರು…

Read More

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹ

ಸಪ್ತಸಾಗರ, ವಾರ್ತೆ, ವಿಜಯಪುರ, ಆ. 13 :ಪವಿತ್ರ ಪುಣ್ಯ ಕ್ಷೇತ್ರ ಧರ್ಮಸ್ಥಳ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ವಿವಿಧ ಹಿಂದೂ ಸಂಘಟನೆ ಮುಖಂಡರು ಹಾಗೂ ಧರ್ಮಸ್ಥಳದ ಭಕ್ತಾದಿಗಳು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು. ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದ ಮೆರವಣಿಗೆ ನಂತರ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಪ್ರಮುಖರಾದ ಶಿವಾನಂದ ದೇಸಾಯಿ, ಅಪ್ಪುಗೌಡ ಪಾಟೀಲ್(ಮನಗೂಳಿ),…

Read More

ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ,ಆ.೧೨:ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮೂರು ದಿನಗಳ ವರೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ.ಈ ಹೋರಾಟವನ್ನು ಉದ್ದೇÀಶಿಸಿ ಎಐಕೆಕೆಎಮ್‌ಎಸ್ ರಾಜ್ಯ ಕಾರ್ಯದರ್ಶಿ ಬಿ. ಭಗವಾನ್‌ರೆಡ್ಡಿ ಅವರು ಮಾತನಾಡಿ, ಕಳೆದ ಜನವರಿ ತಿಂಗಳಲ್ಲಿ ರಾಜ್ಯ ಮಟ್ಟದ ಸುಮಾರು ೪೨೦೦೦ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಪ್ರೀಡ್‌ಂ ಪಾರ್ಕ್ನಲ್ಲಿ ಸತತ ೪ ದಿನಗಳ ಹೋರಾಟ ಕೈಗೊಂಡಾಗ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಉನ್ನತ ಅಧಿಕಾರಿಗಳು ಪ್ರತಿಯೊಬ್ಬರಿಗೂ ಕೇಂದ್ರದ ಭಾಗಶಃ ಪ್ರೋತ್ಸಾಹಧನ ಮತ್ತು…

Read More

ಏರೋಸ್ಪೇಸ್ ಪಾರ್ಕ್ ಉತ್ತರ ಕರ್ನಾಟಕದಲ್ಲಿ ಸ್ಥಾಪಿಸಿ: ಶಂಕರಗೌಡ ಬಿರಾದಾರ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 21 :ರಾಜ್ಯ ಸರ್ಕಾರ ದೇವನಹಳ್ಳಿ ಬಳಿ ಭೂಸ್ವಾಧೀನ ರದ್ದುಪಡಿಸಿದ ಹಿನ್ನಲೆಯಲ್ಲಿ ಉದ್ದೇಶಿತ ಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಬೇಕೆಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಸರ್ಕಾರವನ್ನು ಆಗ್ರಹಿಸಿದ್ದಾರೆಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕದ ಯಾವುದಾದರೂ ಜಿಲ್ಲೆಯಲ್ಲಿ ಸ್ಥಾಪನೆ ಮಾಡಿದರೆ ಪ್ರಾದೇಶಿಕ ಅಸಮತೋಲನ ಕಡಿಮೆಯಾಗಲಿದೆ. ವೈಮಾನಿಕ ಸಂಶೋಧನೆ ಉತ್ಪಾದನೆ ರಿಪೇರಿ ರಕ್ಷಣೆ ವಿಭಾಗ ವಿಶೇಷವಾಗಿ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳ ಬಾಗಿಲನ್ನೇ ತೆರೆವುಯುವ ಏರೊಸ್ಪೇಸ್ ಪಾರ್ಕನ್ನು ಯಾವುದೇ…

Read More