ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಅವ್ಯವಸ್ಥೆ: ತಿಕೋಟದಲ್ಲಿ ಪರೀಕ್ಷಾರ್ಥಿಗಳ ಆಕ್ರೋಶ, ಮರು ಪರೀಕ್ಷೆಗೆ ಒತ್ತಾಯ
ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪ್ರವೇಶ ಪರೀಕ್ಷೆ ವೇಳೆ ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಪರೀಕ್ಷಾ ಕೇಂದ್ರದಲ್ಲಿ ಭಾರೀ ಗೊಂದಲ ಉಂಟಾಗಿ, ನೂರಾರು ಪರೀಕ್ಷಾರ್ಥಿಗಳು ಪರೀಕ್ಷೆಗೆ ಬಹಿಷ್ಕಾರ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ನಡೆದಿದೆ.ತಿಕೋಟದ ಕೋಟ್ಯಾಳ ರಸ್ತೆಯಲ್ಲಿರುವ ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ಆರಂಭವಾಗಬೇಕಿದ್ದ ಪರೀಕ್ಷೆಗೆ ಪ್ರಶ್ನೆಪತ್ರಿಕೆ ಅರ್ಧ ಗಂಟೆ ತಡವಾಗಿ, ಸುಮಾರು 11 ಗಂಟೆಗೆ ವಿತರಿಸಲಾಗಿದೆ ಎಂದು ಪರೀಕ್ಷಾರ್ಥಿಗಳು ಆರೋಪಿಸಿದರು.ಇದರ ಜೊತೆಗೆ ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್ಗಳ…


