ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕಾರಜೋಳ ಡಿಸಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ಜಿಲ್ಲೆಯಲ್ಲಿ ಮರುಕಳಿಸುತ್ತಿರುವ ಭೂಕಂಪನದ ಸಂಶೋಧನೆ ನಡೆಸಿ ಜನರ ಆತಂಕ ನಿವಾರಣೆ ಮಾಡುವುದು, ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವುದು ಹಾಗೂ ಕೋನೋ ಕಾರ್ಪಸ್ ಗಿಡಗಳನ್ನು ನಿಷೇಧಿಸುವುದು ಸೇರಿದಂತೆ ವಿಜಯಪುರ ಜನತೆ ಎದುರಿಸುತ್ತಿರುವ ವಿವಿಧ ಮಹತ್ವದ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ನೇತೃತ್ವದ ನಿಯೋಗ ಸೋಮವಾರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ವಿಜಯಪುರ ಜನತೆಯ ಎದುರಿಸುತ್ತಿರುವ ಸಮಸ್ಯೆಯನ್ನು ವಿವರಿಸಿದ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಮುಂದುವರಿದ ಧರಣಿ, ರೈತ ಸಂಘದ ಬೆಂಬಲ

ಸಪ್ತಸಾಗರ ವಾರ್ತೆ ವಿಜಯಪುರ, ನ. 9:ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 53ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ್ ನಾಗೇಂದ್ರ ಅವರು ಮಾತನಾಡಿ “ಉದ್ದೇಶ ಒಳ್ಳೆದಿದೆ. ಜನರ ಹಿತವಿದೆ. ಅದಕ್ಕೆ ಜನ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಬಸವಣ್ಣ ಹುಟ್ಟಿದಂತ ನಾಡಿದು. ಇವತ್ತಿನ…

Read More

ಸರ್ಕಾರಿ ಉದ್ಯೋಗಗಳನ್ನು ತಕ್ಷಣ ಭರ್ತಿ ಮಾಡಿಬೇಕೆಂದು ಸರ್ಕಾರದ ವಿರುದ್ಧ ಡಿವಿಪಿಯಿಂದ ಯುವ ಜನಾಕ್ರೋಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 30:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಉದ್ಯೋಗಗಳನ್ನು ಕೂಡಲೇ ಭರ್ತಿ ಮಾಡಬೇಕು, ಉದ್ಯೋಗದ ವಯೋಮಿತಿಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಡಿ.ವಿ.ಪಿ ಸಂಘಟನೆಯ ರಾಜ್ಯಧ್ಯಕ್ಷ ಶ್ರೀನಾಥ ಪೂಜಾರಿ ಅವರು ಮಾತನಾಡಿ, ನಾಡಿನಾದ್ಯಂತ ವಿದ್ಯಾರ್ಥಿ ಯುವಜನರ ನಿರುದ್ಯೋಗದ ಸಮಸ್ಯೆ ತೀವ್ರವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಆಗಿರಬಹುದು ಇವತ್ತಿನ ಕಾಂಗ್ರೆಸ್ ಸರ್ಕಾರ ಆಗಿರಬಹುದು. ನಾಲ್ಕು ವರ್ಷದಿಂದ ಯಾವುದೇ ಸರ್ಕಾರಿ ಹುದ್ದೆಗಳನ್ನು ತುಂಬದೇ ಸತಾಯಿಸುತ್ತಿರುವುದು…

Read More

ಸರ್ಕಾರಿ ವೈದ್ಯಕೀಯ ಕಾಲೇಜ್ ಗೆ ಆಗ್ರಹಿಸಿ 8ನೇ ದಿನದಲ್ಲಿ ಮುಂದುವರೆದ ಧರಣಿ ಸತ್ಯಾಗ್ರಹ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 25:ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕೆಂದು ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಕೈಗೊಂಡ ಧರಣಿ ಸತ್ಯಾಗ್ರಹ ಗುರುವಾರ 8ನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.ಏತನ್ಮಧ್ಯೆ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಸತ್ಯಾಗ್ರಹ ಹಿಂತೆಗೆದುಕೊಳ್ಳಲು ಮನವಿ ಮಾಡಲಾಯಿತು. ಆದರೆ ಹೋರಾಟಗಾರರು ವಿಜಯಪುರ ಜಿಲ್ಲೆಗೆ ಘೋಷಣೆ ಮಾಡಿದ ಪಿಪಿಪಿ ಮಾದರಿ ವೈದ್ಯಕೀಯ…

Read More

ವಿಜಯಪುರದಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ವಿಜಯಪುರ ನಗರದಲ್ಲಿ ರಸ್ತೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿ ವಿಷಯದಲ್ಲಿ ಬೇಜವಾಬ್ದಾರಿತನಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಅಥಣಿ ರಸ್ತೆ ತಡೆ ನಡೆಸಿ ಗುಂಡಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.ಪ್ರವಾಸಿ ಮಂದಿರದ ಮುಂಭಾಗದಲ್ಲಿ ಅಥಣಿ ರಸ್ತೆಗೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿದರು.ಕಾಂಗ್ರೆಸ್ ಸರ್ಕಾರ – ಜೀವಕ್ಕೆ ಸಂಚಾರ’, ಗುಂಡಿ ಮುಚ್ಚದೇ ರಾಜ್ಯದ ಜನತೆ…

Read More