ಎಸ್ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹಿಸಿ ಅ.16ರಂದು ಪ್ರತಿಭಟನೆ
ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಡಿ.ಜಿ. ಸಾಗರ ಬಣ) ನೇತೃತ್ವದಲ್ಲಿ ಅ.16ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣನವರ ತಿಳಿಸಿದ್ದಾರೆ.ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ಎಸ್ಐಆರ್ ಪ್ರಕ್ರಿಯೆಯನ್ನು ತಕ್ಷಣ…


