ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಗ್ರಹಿಸಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಹೋರಾಟ ಸಮಿತಿ ನೇತೃತ್ವದಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಯಿತು.ಧರಣಿ ಸತ್ಯಾಗ್ರಹ ಉದ್ದೇಶಿಸಿ ಹೋರಾಟ ಸಮಿತಿ ಸದಸ್ಯ ಅರವಿಂದ ಕುಲಕರ್ಣಿ ಮಾತನಾಡಿ, ಸರಕಾರಿ ಆಸ್ಪತ್ರೆಗೆ ಸೂಕ್ತವಾದ ಸುಮಾರು ೧೪೯ ಎಕರೆಗೂ ಹೆಚ್ಚು ಸ್ಥಳಾವಕಾಶ ಸರಕಾರಿ ಆಸ್ಪತ್ರೆಯ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ರಾಜ್ಯದ ಯಾವ ಜಿಲ್ಲೆಯಲ್ಲಿಯೂ ಇಲ್ಲ. ಸರ್ಕಾರ ಇದನ್ನು ಗುರುತಿಸಿ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ…


