ಸರ್ಕಾರಿ ಉದ್ಯೋಗಗಳನ್ನು ತಕ್ಷಣ ಭರ್ತಿ ಮಾಡಿಬೇಕೆಂದು ಸರ್ಕಾರದ ವಿರುದ್ಧ ಡಿವಿಪಿಯಿಂದ ಯುವ ಜನಾಕ್ರೋಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 30:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಉದ್ಯೋಗಗಳನ್ನು ಕೂಡಲೇ ಭರ್ತಿ ಮಾಡಬೇಕು, ಉದ್ಯೋಗದ ವಯೋಮಿತಿಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಡಿ.ವಿ.ಪಿ ಸಂಘಟನೆಯ ರಾಜ್ಯಧ್ಯಕ್ಷ ಶ್ರೀನಾಥ ಪೂಜಾರಿ ಅವರು ಮಾತನಾಡಿ, ನಾಡಿನಾದ್ಯಂತ ವಿದ್ಯಾರ್ಥಿ ಯುವಜನರ ನಿರುದ್ಯೋಗದ ಸಮಸ್ಯೆ ತೀವ್ರವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಆಗಿರಬಹುದು ಇವತ್ತಿನ ಕಾಂಗ್ರೆಸ್ ಸರ್ಕಾರ ಆಗಿರಬಹುದು. ನಾಲ್ಕು ವರ್ಷದಿಂದ ಯಾವುದೇ ಸರ್ಕಾರಿ ಹುದ್ದೆಗಳನ್ನು ತುಂಬದೇ ಸತಾಯಿಸುತ್ತಿರುವುದು…

Read More

ಸರ್ಕಾರಿ ವೈದ್ಯಕೀಯ ಕಾಲೇಜ್ ಗೆ ಆಗ್ರಹಿಸಿ 8ನೇ ದಿನದಲ್ಲಿ ಮುಂದುವರೆದ ಧರಣಿ ಸತ್ಯಾಗ್ರಹ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 25:ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕೆಂದು ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಕೈಗೊಂಡ ಧರಣಿ ಸತ್ಯಾಗ್ರಹ ಗುರುವಾರ 8ನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.ಏತನ್ಮಧ್ಯೆ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಸತ್ಯಾಗ್ರಹ ಹಿಂತೆಗೆದುಕೊಳ್ಳಲು ಮನವಿ ಮಾಡಲಾಯಿತು. ಆದರೆ ಹೋರಾಟಗಾರರು ವಿಜಯಪುರ ಜಿಲ್ಲೆಗೆ ಘೋಷಣೆ ಮಾಡಿದ ಪಿಪಿಪಿ ಮಾದರಿ ವೈದ್ಯಕೀಯ…

Read More

ವಿಜಯಪುರದಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ವಿಜಯಪುರ ನಗರದಲ್ಲಿ ರಸ್ತೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿ ವಿಷಯದಲ್ಲಿ ಬೇಜವಾಬ್ದಾರಿತನಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಅಥಣಿ ರಸ್ತೆ ತಡೆ ನಡೆಸಿ ಗುಂಡಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.ಪ್ರವಾಸಿ ಮಂದಿರದ ಮುಂಭಾಗದಲ್ಲಿ ಅಥಣಿ ರಸ್ತೆಗೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿದರು.ಕಾಂಗ್ರೆಸ್ ಸರ್ಕಾರ – ಜೀವಕ್ಕೆ ಸಂಚಾರ’, ಗುಂಡಿ ಮುಚ್ಚದೇ ರಾಜ್ಯದ ಜನತೆ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಗ್ರಹಿಸಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಹೋರಾಟ ಸಮಿತಿ ನೇತೃತ್ವದಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಯಿತು.ಧರಣಿ ಸತ್ಯಾಗ್ರಹ ಉದ್ದೇಶಿಸಿ ಹೋರಾಟ ಸಮಿತಿ ಸದಸ್ಯ ಅರವಿಂದ ಕುಲಕರ್ಣಿ ಮಾತನಾಡಿ, ಸರಕಾರಿ ಆಸ್ಪತ್ರೆಗೆ ಸೂಕ್ತವಾದ ಸುಮಾರು ೧೪೯ ಎಕರೆಗೂ ಹೆಚ್ಚು ಸ್ಥಳಾವಕಾಶ ಸರಕಾರಿ ಆಸ್ಪತ್ರೆಯ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ರಾಜ್ಯದ ಯಾವ ಜಿಲ್ಲೆಯಲ್ಲಿಯೂ ಇಲ್ಲ. ಸರ್ಕಾರ ಇದನ್ನು ಗುರುತಿಸಿ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ…

Read More

ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12:ದ್ರಾಕ್ಷಿ ಬೆಳೆಗಾರರ ವಿವಿಧ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ರೈತ ಸಂಘ ಶುಕ್ರವಾರ ಮನವಿ ಸಲ್ಲಿಸಿತು.ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ,ಇಡೀ ಕರ್ನಾಟಕದಲ್ಲಿ ಅಂದಾಜು 1 ಲಕ್ಷ ಎಕರೆ ದ್ರಾಕ್ಷಿ ಬೆಳೆಯಲಾಗುತ್ತದೆ. ವಿಜಯಪುರ ಜಿಲ್ಲೆಯಲ್ಲಿಯೇ ಶೇ. 70ರಷ್ಟು ದ್ರಾಕ್ಷಿ ಬೆಳೆಯುತ್ತಿದ್ದು, ಇದನ್ನು ನಂಬಿ 15-20 ಸಾವಿರ ರೈತ ಕುಟುಂಬಗಳು ಹಾಗೂ ಸಾವಿರಾರು ರೈತ ಕಾರ್ಮಿಕರು ಬದುಕು ಸಾಗಿಸುತ್ತಿದ್ದಾರೆ. ಆದರೆ ದಲ್ಲಾಳಿಗಳ…

Read More

ಸಾರಿಗೆ ನೌಕರರ ಅನಿರ್ದಿಷ್ಟ ಮುಷ್ಕರ: ಪ್ರಯಾಣಿಕರ ಪರದಾಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದರಿಂದ ರಾಜ್ಯದ ಎಲ್ಲೆಡೆಯಂತೆ ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.ನಿನ್ನೆಯಷ್ಟೇ ಸಾರಿಗೆ ನೌಕರರ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಮಾತುಕತೆಗಳು ವಿಫಲವಾಗಿದ್ದರಿಂದ ಸಾರಿಗೆ ಮುಷ್ಕರ ಇಂದಿನಿಂದ ಆರಂಭಗೊಂಡಿದೆ.ಬೆಳಿಗ್ಗೆ 6 ಗಂಟೆಯಿಂದಲೇ ಸಾರಿಗೆ ಮುಷ್ಕರ ಆರಂಭವಾಗಿದ್ದರಿಂದ ವಿಜಯಪುರ ಜಿಲ್ಲೆಯ ಯಾವುದೇ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ಕಂಡು ಬರಲಿಲ್ಲ. ವಿಜಯಪುರ…

Read More

ಒಳ ಮೀಸಲಾತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 1 : ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕುವ ಕರೆ ಮೇರೆಗೆ ಶುಕ್ರವಾರ ವಿಜಯಪುರದಲ್ಲಿಯೂ ವಿವಿಧ ಮಾದಿಗ ಸಮುದಾಯಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ವಿಜಯಪುರದಲ್ಲಿಯೂ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸಿದರು. ಒಳಮೀಸಲಾತಿ ಜಾರಿಗೊಳಸಲೇಬೇಕು ಎಂಬ ಘೋಷಣೆಗಳನ್ನು ಕೂಗಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿ ವಿವಿಧ ಪ್ರಮುಖ…

Read More