371(ಜೆ) ಸ್ಥಾನಮಾನ, ರೈತರ ಬೇಡಿಕೆ ಈಡೇರಿಸಲು ದೊಡಮನಿ ಆಗ್ರಹ
ಸಪ್ತಸಾಗರ ವಾರ್ತೆ,ದೇವರಹಿಪ್ಪರಗಿ, ಅ. 14:ವಿಜಯಪುರ ಜಿಲ್ಲೆಯನ್ನು 371(ಜೆ) ಅಡಿಯಲ್ಲಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಸ್ಥಗಿತಗೊಂಡಿರುವ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಕೂಡಲೇ ಮರುಚಾಲನೆಗೊಳಿಸಿ ಅರ್ಹ ಫಲಾನುಭವಿಗಳಿಗೆ ವಿಳಂಬವಿಲ್ಲದೆ ತಲುಪಿಸಬೇಕು ಎಂದು ಹುಣಶ್ಯಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಂಗಾರೆಮ್ಮ ಮಾನಪ್ಪ ದೊಡಮನಿ ಸರ್ಕಾರವನ್ನು ಆಗ್ರಹಿಸಿದ್ದಾರೆ.ವಿಜಯಪುರ ಜಿಲ್ಲೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿ ಸಾಧಿಸಲು 371(ಜೆ) ವಿಶೇಷ ಸ್ಥಾನಮಾನ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು 371(ಜೆ) ವ್ಯಾಪ್ತಿಗೆ ಒಳಪಡಿಸಲು ಸರ್ಕಾರ ತುರ್ತು…


