ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ವಿವಿಧ ಇಲಾಖೆಗಳಿಗೆ ಭೇಟಿ, ಚರ್ಚೆ
ಸಪ್ತಸಾಗರ ವಾರ್ತೆ, ವಿಜಯಪುರ,ಡಿ.3: ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ಅವರು ಬುಧವಾರ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಸಿದರು.ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರೊಂದಿಗೆ ಜಿಲ್ಲೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ವಿವಿಧ ಯೋಜನೆಗಳ ಪ್ರಗತಿಯ ಕುರಿತು ಚರ್ಚಿಸಿ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಂಡು,ಯೋಜನೆಯ ಲಾಭ ಅರ್ಹರಿಗೆ…


