ಗುರುಹಿರಿಯರುಹಾಕಿಕೊಟ್ಟಮಾರ್ಗದಲ್ಲಿನಡೆದರೆಯಶಸ್ಸುಖಂಡಿತ: ಡಿಸಿಎಂಡಿ.ಕೆ. ಶಿವಕುಮಾರ್
ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ.15:“ಬೇರನ್ನು ಮರೆತರೆ ಮರ ಬಾಳುವುದಿಲ್ಲ. ಅದೇ ರೀತಿ ನಿಮ್ಮ ಮೂಲವನ್ನು ಮರೆತರೆ ಫಲ ದೊರೆಯುವುದಿಲ್ಲ. ಅದೇ ರೀತಿ ಗುರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ಯಶಸ್ಸು ಖಂಡಿತ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು.ನಗರದ ಪುರಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಕೆ.ಜೆ. ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.“ವಿದ್ಯೆಯಿಂದ ವಿನಯ, ವಿನಯದಿಂದ ಯೋಗ್ಯತೆ, ಯೋಗ್ಯತೆಯಿಂದ ಹಣ, ಹಣದಿಂದ ಧರ್ಮ, ಧರ್ಮದಿಂದ ಸುಖ ದೊರೆಯುತ್ತದೆ….


