ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ,ನ.10:ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಉಪ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೋಮವಾರ ದಿಢೀರ ಭೇಟಿ ನೀಡಿ,ಕಚೇರಿ ಕಾರ್ಯ ವೈಖರಿ ಕುರಿತು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಕಚೇರಿ ಕಾರ್ಯ‌ನಿರ್ವಹಣೆ ಕುರಿತು ಮಾಹಿತಿ‌ ನೀಡಿದರು.

Read More

ನಿಡಗುಂದಿ ತಾಲೂಕಾ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ ಅ.15: ಜಿಲ್ಲೆಯ ನಿಡಗುಂದಿ ತಾಲೂಕಿನ ತಹಶೀಲ್ದಾರ ಕಚೇರಿ, ನ್ಯಾಯಬೆಲೆ ಅಂಗಡಿ, ಅಂಗನವಾಡಿ-ಗ್ರಾಮ ಒನ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಡಗುಂದಿ ತಹಶೀಲ್ದಾರ ಕಚೇರಿ ಹಾಗೂ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕಾರ್ಯಗಳಿಗೆ ಸ್ಪಂದಿಸಬೇಕು. ಸಕಾಲ ಅರ್ಜಿಗಳನ್ನು ಕೂಡಲೇ ವಿಲೇ ಮಾಡಬೇಕು. ಯಾವುದೇ ಬಾಕಿ ಕಡತಗಳನ್ನು ಉಳಿಸಿಕೊಳ್ಳದೇ…

Read More

ತ್ವರಿತವಾಗಿ ಬೆಳೆ ಹಾನಿ ಪರಿಹಾರ ನೀಡಲು ಬಿಜೆಪಿ ರೈತ ಮೋರ್ಚಾ ನಿಯೋಗ ಜಿಲ್ಲಾಧಿಕಾರಿಗಳಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13:ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಭೇಟಿ ಮಾಡಿ ಬೆಳೆ ಪರಿಹಾರವನ್ನು ಕೂಡಲೇ ನೀಡಬೇಕೆಂದು ಸೋಮವಾರ ಸಂಜೆ ಮನವಿ ಸಲ್ಲಿಸಲಾಯಿತು.ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿ ಆಗದಷ್ಟು ವಾಡಿಕೆಗಿಂತ ಹೆಚ್ಚಿನ ಮಳೆ ವಿಜಯವುರ ಜಿಲ್ಲೆಯಲ್ಲಿ ಆಗಿದೆ ವರದಿಗಳ ಪ್ರಕಾರ ವಾಡಿಕೆ ಗಿಂತ ಶೇ 150 ಕ್ಕೂ ಹೆಚ್ಚು ಮಳೆಯಾಗಿದೆ ಎಂದು ತಿಳಿದು ಬಂದಿರುತ್ತದೆ. ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ 7.50 ಲಕ್ಷ ಹೆಕ್ಟರ್ ಪ್ರದೇಶದ ಬೆಳೆ ಸಂಪೂರ್ಣ ನಾಶವಾಗಿದೆ. ಮೂರು…

Read More

ಜಿಲ್ಲೆಯಲ್ಲಿ ನ.1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ: ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಜಿಲ್ಲೆಯಲ್ಲಿ ಪಕ್ವವಾಗಿರುವ ಕಬ್ಬನ್ನು ಆದ್ಯತೆಯ ಮೇಲೆ ಕಟಾವು ಮಾಡಿ ನವೆಂಬರ್ 1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ ಕಬ್ಬು ಪೂರೈಸಿದ ರೈತರಿಗೆ 14 ದಿನಗಳೊಳಗಾಗಿ ಕಬ್ಬಿನ ಹಣ ಪಾವತಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿದ ಅವರು, ಆಯುಕ್ತರು ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ನಿರ್ದೇಶನಾಲಯ ಬೆಂಗಳೂರು ಇವರು ಪ್ರಸಕ್ತ…

Read More

ಸ್ವಚ್ಛತಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪ್ರವಾಸೋದ್ಯಮ ಇಲಾಖೆ, ಮಹಾನಗರ ಪಾಲಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ನಗರದಲ್ಲಿ ಹಮ್ಮಿಕೊಂಡ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ “ಏಕ್ ದಿನ್, ಏಕ್ ಘಂಟಾ, ಏಕ್ ಸಾಥ (ಒಂದು ದಿನ, ಒಂದು ಘಂಟೆ, ಎಲ್ಲರೂ ಒಟ್ಟಿಗೆ)” ಎಂಬ ಘೋಷವಾಕ್ಯದೊಂದಿಗೆ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಹತ್ತಿರದ ಕೋಟೆಗೋಡೆ ಆವರಣದಲ್ಲಿ ಸ್ವಚ್ಛಗೊಳಿಸುವ ಮೂಲಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ….

Read More

ಅ. 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ,ಸೆ.24:ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ‌ ಹಾಗೂ ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.ಸಾರ್ವಜನಿಕರಿಗೆ ಮಹಾತ್ಮ ಗಾಂಧೀಜಿಯವರ ಬದುಕು, ಆದರ್ಶ ಹಾಗೂ ಅವರ ಜೀವನ…

Read More

ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ ಸೆ.18:ಜಿಲ್ಲಾಡಳಿತದ ಮೂಲಕ ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.‌ ಆನಂದ ಕೆ. ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಅ.7ರ ಬೆಳಿಗ್ಗೆ 9-30 ಗಂಟೆಗೆ ನಗರದ ಶ್ರೀ…

Read More

ಮಾದಕ ದ್ರವ್ಯ-ವಸ್ತು ಕಡಿವಾಣಕ್ಕೆ ಶಾಲಾ-ಕಾಲೇಜಿನಲ್ಲಿ ಆಂಟಿ ಡ್ರಗ್ ಘಟಕ ಮೂಲಕ ಜಾಗೃತಿ ಮೂಡಿಸಿ -ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.17: ಜಿಲ್ಲೆಯಲ್ಲಿ ಮಾದಕ ದ್ರವ್ಯ ಕಡಿವಾಣಕ್ಕಾಗಿ ಮಾದಕ ದ್ರವ್ಯಗಳ ಸೇವನೆಯಿಂದ ಜನರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಶಾಲಾ ಕಾಲೇಜಿನಲ್ಲಿ ಆಂಟಿ ಡ್ರಗ್ ಘಟಕ ಸ್ಥಾಪಿಸಿ, ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಾದಕ ದ್ರವ್ಯ-ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಶಾಲಾ ಕಾಲೇಜ್‍ಗಳಲ್ಲಿ ನಿರ್ಮಿಸಿದ…

Read More

ಸಾಹಿತ್ಯ ಹರಿಯುವ ನೀರಿನಂತಾಗಬೇಕು- ಜಿಲ್ಲಾಧಿಕಾರಿ ಡಾ.ಕೆ ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಸಾಹಿತ್ಯದ ಬರವಣಿಗೆ ನಿರಂತರವಾಗಿರಬೇಕು ಮತ್ತು ಸಾಹಿತ್ಯ ಯಾವಾಗಲೂ ಹರಿಯುವ ನೀರಿನಂತಾಗಬೇಕು. ಒತ್ತಡದ ಸೇವೆಯ ಮಧ್ಯೆದಲ್ಲಿ ಸಾಹಿತ್ಯ ಕೃಷಿ ಮಾಡುತ್ತಿರುವ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಕಾಯ೯ ಅತ್ಯಂತ ಶ್ಲಾಘನೀಯ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ.ಆನಂದ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಉದ್ಘಾಟನೆಗೊಂಡ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಹಾಗೂ ದೇವರಗೆಣ್ಣೂರ ಎಂಬ ಎರಡು ಕೃತಿಗಳ ಲೋಕಾರ್ಪಣೆ ಸಂದರ್ಭದಲ್ಲಿ ಮಾತನಾಡುತ್ತ ಕೃತಿಗಳು ಯುವಕರಿಗೆ ಸ್ಫೂರ್ತಿ ಮತ್ತು ಪ್ರೇರಣೆಯಾಗಲಿ ಎಂದರು.ಜಿಲ್ಲಾ…

Read More

ಡೋಣಿ ನದಿಗೆ ಜಿಲ್ಲಾಧಿಕಾರಿ ಭೇಟಿ, ಪ್ರವಾಹ ತಡೆಗೆ ಕ್ರಮಗಳ ಕುರಿತು ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಶನಿವಾರ ಜಿಲ್ಲೆಯ ಸಾರವಾಡ ಬಳಿ ಡೋಣಿ ನದಿಗೆ ಭೇಟಿ ನೀಡಿ ಪರಿಶೀಲಿಸಿದರು.ಡೋಣಿ ನದಿಯ ಪ್ರವಾಹ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಜಿಲ್ಲಾ ಪಂಚಾಯತಿಯ‌ ಮುಖ್ಯ‌ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡದ ಹತ್ತಿರದ ಡೋಣಿ ನದಿಯ ಸೇತುವೆಯ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪ್ರವಾಹ ತಡೆಗೆ ಅನುಸರಿಸಬೇಕಾದ ಕ್ರಮಗಳ…

Read More