
ಜಿಲ್ಲಾಧಿಕಾರಿ ಡಾ.ಆನಂದ ವಿವಿಧೆಡೆ ಭೇಟಿ, ಪರಿಶೀಲನೆ
ಸಪ್ತಸಾಗರ ವಾರ್ತೆ,ವಿಜಯಪುರ,ಆ. 7: ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ವಿಜಯಪುರ ನಗರದ ಶಿವಾಜಿ ಸರ್ಕಲ್ ಹತ್ತಿರ, ರಾಮನಗರ ರಸ್ತೆ, ನವಬಾಗ ರಸ್ತೆ, ಮನಗೂಳಿ ಅಗಸಿ, ಜುಮ್ಮಾ ಮಸೀದಿ, ಕಸ್ತೂರಿ ಕಾಲನಿ, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗುರುವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಗರದಾದ್ಯಂತ ಇರುವ ಕೋಟೆಗೋಡೆ ಆವರಣಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಮುಳ್ಳುಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ…