ಕಾನೂನು ಸುವ್ಯವಸ್ಥೆ ಕುಸಿತ ಆರೋಪ: ವಿಜಯಪುರದಲ್ಲಿ ಬಿಜೆಪಿ ಬೃಹತ್ ರ‍್ಯಾಲಿ
ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಕೆ ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿ, ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ರ‍್ಯಾಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿತು. ಬಳಿಕ…


