ಸಾಧನೆ ಮಾಡುವ ಮನಸ್ಸಿದ್ದರೆ ಅಂಗ ವೈಕಲ್ಯ ಲೆಕ್ಕಕ್ಕೆ ಬರುವುದಿಲ್ಲ; ಬಸವರಾಜ ಉಮರಾಣಿ
ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 28:ದೇವರು ನನಗೆ ದೃಷ್ಠಿ ಕೊಟ್ಟಿದ್ದರೆ ಬಹುಶಃ ಇಂತಹ ಸಾಧನೆ ಮಾಡುವ ಧೈರ್ಯ ಮಾಡುತ್ತಿರಲಿಲ್ಲ. ನಮ್ಮಲ್ಲಿರುವಸಮಸ್ಯೆಗಳು ನಮ್ಮ ಸಾಧನೆಗೆ ಪೂರಕವಾಗಬೇಕೆ ಹೊರತು ಮಾರಕವಾಗಬಾರದು. ಸಾಧನೆ ಮಾಡುವಮನಸಿದ್ದರೆ ಸರ್ವ ಸಿದ್ಧಿಯಾಗುತ್ತದೆ ಎಂದು ಮಾನವ ಕಂಪ್ಯೂಟರ್ ಖ್ಯಾತಿಯ ಬಸವರಾಜ ಉಮರಾಣಿ ಹೇಳಿದರು.ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿಆಯೋಜಿಸಲಾಗಿದ್ದ ಒಂದು ದಿನದ ವಿಶೇಷ ಉಪನ್ಯಾಸಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದ ಅವರು, ಗಣಿತ ಎನ್ನುವುದು ಹಲವರಿಗೆ ಕಬ್ಬಿಣದ ಕಡಲೆಯಾದರೆ ಕೆಲವರಿಗೆಅದು ಎಲ್ಲದಕ್ಕಿಂತಲೂ ಸಾಮಾನ್ಯವಾದ ವಿಷಯವಾಗಿ ಕಾಣುತ್ತದೆ.ಅದಕ್ಕೆ ಕಾರಣ ಆ ವಿಷಯದ…


