ದೇವರ ದಾಸಿಮಯ್ಯನವರ ವಚನಗಳ ಸಾರ ಸಮಾಜಕ್ಕೆ ದಾರಿ ದೀವಿಗೆ: ಡಾ. ಔದ್ರಾಮ
ಸಪ್ತಸಾಗರ ವಾರ್ತೆ, ವಿಜಯಪುರ, ಮಾ.23:ಜೀವನ ಎಂಬ ರಥದಲ್ಲಿ ಭಕ್ತಿ ಎಂಬ ಕೀಲಿ ಪ್ರತಿಯೊಬ್ಬರಿಗೂ ಅತೀ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.ಇಂದಿನ ಒತ್ತಡದ ಬದುಕಿನಲ್ಲಿ ಬಹುತೇಕರು ಭಕ್ತಿಮಾರ್ಗದಿಂದ ವಿಮುಖರಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ಅದೆಷ್ಟೇ ಒತ್ತಡ ಇದ್ದರೂ ಪ್ರತಿಯೊಬ್ಬರೂ ಭಕ್ತಿ…


