ಧರ್ಮಸ್ಥಳ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ಮಾಹಿತಿ ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 9: ಜಿಲ್ಲೆಯ ತಾಳಿಕೋಟೆಯ ವಿಠ್ಠಲ್ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ತಾಲ್ಲೂಕಿನ ಗಣೇಶನಗರ ವಲಯದ 10 ಒಕ್ಕೂಟದ ಪದಾಧಿಕಾರಿಗಳಿಗೆ ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ ಅವರು ಕಾರ್ಯಾಗಾರ ಉದ್ಘಾಟಿಸಿದರು.ವಲಯ ಮಟ್ಟದಲ್ಲಿ 25 ರಿಂದ 30 ತಂಡಗಳನ್ನು ಒಳಗೊಂಡಂತೆ ಒಂದು ಒಕ್ಕೂಟದಂತೆ 10 ಒಕ್ಕೂಟಗಳು ಕಾರ್ಯ ನಿರ್ವಹಿಸುತ್ತಿದ್ದು. 10 ಒಕ್ಕೂಟದಿಂದ 50 ಜನ ಪದಾಧಿಕಾರಿಗಳು ಈ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.ವಿಜಯಪುರ ಜಿಲ್ಲಾ ನಿರ್ದೇಶಕ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ವಿವಾದ: ಸಿಎಂ ಕ್ಷಮೆಯಾಚನೆಗೆ ಆಗ್ರಹ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 29:ಶ್ರೀ ಕ್ಷೇತ್ರ ಧರ್ಮಸ್ಥಳದ ಘನತೆ ಗೌರವಕ್ಕೆ ಮಸಿ ಬಳಿಯುವ ಮೂಲಕ ಹಿಂದೂ ಸಮಾಜಕ್ಕೆ ಅವಮಾನ ಮಾಡುವ ಕಿಡಿಗೇಡಿಗಳ ಷಡ್ಯಂತ್ರವನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸಾರ್ವಜನಿಕರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ನಗರ ಅಧ್ಯಕ್ಷ ಸಂದೀಪ ಪಾಟೀಲ ಒತ್ತಾಯಿಸಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಂತರ ಭಕ್ತಾಧಿಗಳನ್ನು ಹೊಂದಿರುತ್ತದೆ. ಈ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಮಂದಿ ಭಕ್ತಾಧಿಗಳು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ…

Read More

ಧರ್ಮಸ್ಥಳ ವಿವಾದ :ಹಿಂದೂಗಳ ಭಾವನೆ ಕೆರಳಿಸುವ ಕೆಲಸ: ಬಸನಗೌಡ ಟೀಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 29 :ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸಿ ಹಿಂದೂಗಳ ಭಾವನೆಯನ್ನು ಕಾಂಗ್ರೆಸ್ ಸರ್ಕಾರ ಕೆರಳಿಸುವ ಕೆಲಸ ಮಾಡಿದೆ. ಇದೊಂದು ಅನೈತಿಕ ಸರ್ಕಾರ. ಈ ಸರ್ಕಾರ ಕಿತ್ತೊಗೆಯಲು ಜನರಲ್ಲಿ ಜಾಗೃತಿ ಮೂಡಿಸಲು ಸಂಘಟಿತ ಹೋರಾಟ ನಡೆಸಲಾಗುವುದು. ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ಕೈ ಹಾಕಿರುವ ಕಾಂಗ್ರೆಸ್ ಉಳಿಗಾಲ ಇಲ್ಲ ಎಂದು ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ (ತುಂಬಗಿ) ಹೇಳಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯ ಹಾಗೂ ಭಕ್ತಿ ಸ್ಥಳದ ಮೇಲೆ ರಾಜಕಾರಣ ಸಲ್ಲ. ಜೆಡಿಎಸ್…

Read More

ಧರ್ಮಸ್ಥಳ ಚಲೋ ನಿಮಿತ್ತ ಪ್ರತಿಭಟನೆ ಮೆರವಣಿಗೆ: ಸರ್ಕಾರದ ವಿರುದ್ಧ ಪ್ರತಿಭಟನೆಕಾರರ ಆಕ್ರೋಶ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29:ಧರ್ಮಸ್ಥಳ ಸುಕ್ಷೇತ್ರ ವಿರುದ್ಧ ಷಡ್ಯಂತ್ರ ಖಂಡಿಸಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಯಿತು.ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ನಗರದ ಗಾಂಧಿ ವೃತದಿಂದ ಬಸವೇಶ್ವರ ಹಾಗೂ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟಿರುವ ಆರೋಪ ಖಂಡಿಸಿ ಪ್ರತಿಭಟನೆಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಧರ್ಮದ ಉಳಿವಿಗಾಗಿ ಧರ್ಮ ಯುದ್ದ ಹೆಸರಿನಲ್ಲಿ ಹೋರಾಟ, ಸರ್ಕಾರದ ವಿರುದ್ದ ಪ್ರತಿಭಟನೆಕಾರರು ಘೋಷಣೆಗಳನ್ನು ಕೂಗಿದರು.ಇದೇ ಸಂದರ್ಭದಲ್ಲಿ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ…

Read More

ಸುಕ್ಷೇತ್ರ ಧರ್ಮಸ್ಥಳದ ಅಪಪ್ರಚಾರದ ವಿರುದ್ಧ ಆಗಸ್ಟ್ 13ರಂದು ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11:ಸುಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆದಿರುವ ಅಪಪ್ರಚಾರವನ್ನು ಖಂಡಿಸಿ ಆ. 13ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀಧರ್ಮಸ್ಥಳ ಭಕ್ತಾಭಿಮಾನಿ ಹಾಗೂ ಲಿಂಬೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಶ್ರೀ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ರೂಪಿಸಿ ಸುಕ್ಷೇತ್ರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆದಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.ಆ. 13ರಂದು ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಾ….

Read More

ಧರ್ಮಸ್ಥಳ ಪ್ರಕರಣ: ಸೂಕ್ತ ತನಿಖೆಗೆ ಆಗ್ರಹಿಸಿ ಸಿಎಂಗೆ ಆಮ್ ಆದ್ಮಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 25:ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೊಂದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.ಅನಂತರ ಜಿಲ್ಲಾಧಿಕಾರಿ ಮೂಲಕ ಈ ಬಗ್ಗೆ ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾತನಾಡಿ, ಕರ್ನಾಟಕದ ನಾಗರಿಕರ ಪರವಾಗಿ ಮತ್ತು 2012 ರಲ್ಲಿ ಧರ್ಮಸ್ಥಳದಲ್ಲಿ ಕ್ರೂರವಾಗಿ ಅತ್ಯಾಚಾರ ಮತ್ತು ಕೊಲೆಗೆ…

Read More

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ವೀರೇಂದ್ರ ಹೆಗಡೆಯವರ ಕಾರ್ಯ ಸಮಾಜಕ್ಕೆ ಮಾದರಿ:ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ ಡಾ. ಪರಮ ಪೂಜ್ಯ ಡಿ. ವೀರೇಂದ್ರ ಹೆಗಡೆಯವರು ಮದ್ಯ ವ್ಯಸನಿಗಳ ಮುಕ್ತ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜನೆ ಮಾಡಿ ಸಾಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಬುಧವಾರ ಓಂ ಶ್ರೀ ಮಂಜುನಾಥಯ ನಮಃ ಶ್ರೀ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ…

Read More