
ಶ್ರೀ ಕ್ಷೇತ್ರ ಧರ್ಮಸ್ಥಳ ವಿವಾದ: ಸಿಎಂ ಕ್ಷಮೆಯಾಚನೆಗೆ ಆಗ್ರಹ
ಸಪ್ತ ಸಾಗರ ವಾರ್ತೆ ವಿಜಯಪುರ, ಆ. 29:ಶ್ರೀ ಕ್ಷೇತ್ರ ಧರ್ಮಸ್ಥಳದ ಘನತೆ ಗೌರವಕ್ಕೆ ಮಸಿ ಬಳಿಯುವ ಮೂಲಕ ಹಿಂದೂ ಸಮಾಜಕ್ಕೆ ಅವಮಾನ ಮಾಡುವ ಕಿಡಿಗೇಡಿಗಳ ಷಡ್ಯಂತ್ರವನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸಾರ್ವಜನಿಕರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ನಗರ ಅಧ್ಯಕ್ಷ ಸಂದೀಪ ಪಾಟೀಲ ಒತ್ತಾಯಿಸಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಂತರ ಭಕ್ತಾಧಿಗಳನ್ನು ಹೊಂದಿರುತ್ತದೆ. ಈ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಮಂದಿ ಭಕ್ತಾಧಿಗಳು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ…