ಯೋಜಿತ ಕುಟುಂಬ ಯೋಜನೆಯಿಂದ ಸುಂದರ ಭವಿಷ್ಯ: ಡಿಎಚ್‌ಒ ಡಾ. ಸಂಪತಕುಮಾರ ಗುಣಾರಿ
ಸಪ್ತಸಾಗರ ವಾರ್ತೆ ವಿಜಯಪುರ, ಜು. 14:ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಹಾಗೂ ಮಕ್ಕಳ ನಡುವೆ ಸೂಕ್ತ ಅಂತರ ಕಾಯ್ದುಕೊಳ್ಳುವ ಮೂಲಕ ತಾಯಿ ಮತ್ತು ಮಕ್ಕಳ ಆರೋಗ್ಯವನ್ನು ಉತ್ತಮಗೊಳಿಸಬಹುದು. ಯೋಜಿತ ಕುಟುಂಬದಿಂದ ಕುಟುಂಬದ ಸುಂದರ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತಕುಮಾರ ಗುಣಾರಿ ಹೇಳಿದರು.ಜಿಲ್ಲಾ ಆಸ್ಪತ್ರೆ ಆವರಣದ ನರ್ಸಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ತಾಯಿ ಮರಣ ಪ್ರಮಾಣ ಹಾಗೂ ಗರ್ಭಧಾರಣೆಗೆ ಸಂಬಂಧಿಸಿದ ತೊಂದರೆಗಳನ್ನು ತಡೆಗಟ್ಟುವುದೇ…


